Daily Horoscope
✕

ಟೋಲ್​ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

Webdunia
ಮಂಗಳವಾರ, 6 ಜೂನ್ 2023 (17:24 IST)
ಟೋಲ್​ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದಿದ್ದು ಈ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ರಾಮನಗರ ‌ತಾಲೂಕಿನ ಶೇಷಗಿರಿಹಳ್ಳಿ‌ ಟೋಲ್ ಪ್ಲಾಜಾ ಬಳಿ ಟೋಲ್​ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಕಾರಿನಲ್ಲಿ ಬಂದಿದ್ದ ಯುವಕರ ನಡುವೆ ಮಾರಾಮಾರಿಯಾಗಿತ್ತು. ಇದನ್ನೇ ಮನಸಿನಲ್ಲಿಟ್ಟುಕೊಂಡಿದ್ದ ಯುವಕರು ಟೋಲ್​ನಲ್ಲಿ ಕೆಲಸ ಮಾಡ್ತಿದ್ದ ಪವನ್​ಕುಮಾರ್​ ಹತ್ಯೆ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಕರಿಕಲ್ ತಾಂಡ್ಯ ನಿವಾಸಿ ಪವನ್​​ಕುಮಾರ್ ಕೆಲಸ ಮುಗಿಸಿ ಊಟಕ್ಕೆ ಹೋಗಿದ್ದಾಗ ಪವನ್ ‌ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಟೋಲ್​ನಿಂದ ಹಿಂಬಾಲಿಸಿಕೊಂಡು ಬಂದು ದುಷ್ಕರ್ಮಿಗಳು ಪವನ್​​ ಹತ್ಯೆಗೈದಿದ್ದಾರೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಟೋಲ್ ಬಳಿ ಗಲಾಟೆ ನಡೆದಿತ್ತು. ಬಳಿಕ ರಾತ್ರಿ 12 ಗಂಟೆಗೆ ಕೆಲಸ ಮುಗಿಸಿಕೊಂಡು ಊಟಕ್ಕೆಂದು ಪವನ್ ಹೊರಟಿದ್ದ. ಈ ವೇಳೆ ಪವನ್​ನನ್ನು ಹಿಂಬಾಲಿಸಿದ ಯುವಕರು ಆತನ ಮೇಲೆ ಹಾಕಿ ಸ್ಟಿಕ್​ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಹತ್ಯೆ ಮಾಡಿದ ಆರೋಪಿಗಳಿಗಾಗಿ ಬಿಡದಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments