ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐ ವಹಿಸುವವರೆಗೂ ಹೋರಾಟ: ಸ್ನೇಹಮಯಿ ಕೃಷ್ಣ

Sampriya
ಶುಕ್ರವಾರ, 27 ಸೆಪ್ಟಂಬರ್ 2024 (18:19 IST)
Photo Courtesy X
ಚಾಮರಾಜನಗರ: ಮುಡಾ ಹಗರಣ ಸಂಬಂಧ ನ್ಯಾಯಾಲಯದ ಆದೇಶದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗುತ್ತಿದ್ದ ಹಾಗೇ ಇದೂ ಪ್ರಾಮಾಣಿಕ ಹೋರಾಟಕ್ಕೆ ಸಂದ ಜಯ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದರು.

ಚಾಮರಾಜನಗರದ ಕರುಣಾಕರ ಎಂಬುವರಿಗೆ ಹಣ ವಂಚನೆ ಎಸಗಿದ ಪ್ರಕರಣ ಸಂಬಂಧ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾದ ಬಳಿಕ ಮಾತನಾಡಿದ ಸ್ನೇಹಮಯಿ ಕೃಷ್ಣ, ಈ ಪ್ರಕರಣದಿಂದ ಒಬ್ಬ ಸಾಮಾನ್ಯ ಪ್ರಜೆ ಕೂಡಾ ಸಿಎಂ ವಿರುದ್ಧ ಕಾನೂನು ಹೋರಾಟ ಮಾಡಬಹುದು ಎಂಬುದು ಪ್ರಕರಣದಿಂದ ಸಾಬೀತಾಗಿದೆ.

ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿದ್ದರೂ ಲೋಕಾಯುಕ್ತ ಎಸ್‌ಪಿ ಉದೇಶ್ ನ್ಯಾಯಾಲಯದ ಆದೇಶಕ್ಕೆ ಪೂರಕವಾಗಿ ನಡೆದುಕೊಂಡಿಲ್ಲ. ಮೇಲಾಧಿಕಾರಿಗಳ ಒತ್ತಡ ಹಾಗೂ ಆದೇಶದ ಬಳಿಕವಷ್ಟೆ ಎಫ್‌ಐಆರ್‌ ಮಾಡಿದ್ದು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸುವವರೆಗೂ ಹೋರಾಟ ಮಾಡಿ, ಸೋಮವಾರ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದರು.

ಅನ್ಯರ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿ ಬಂದಾಗ ರಾಜೀನಾಮೆಗೆ ಪಟ್ಟುಹಿಡಿಯುತ್ತಿದ್ದ ಸಿದ್ದರಾಮಯ್ಯ ತಮ್ಮ ವಿರುದ್ಧವೇ ದೂರು ದಾಖಲಾದಾಗ ರಾಜೀನಾಮೆ ನೀಡುವುದಿಲ್ಲ ಎಂದು ಪಟ್ಟುಹಿಡಿಯುವುದು ವಿಪರ್ಯಾಸ. ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚು ಮಕ್ಕಳ ಮಾಡಿಕೊಳ್ಬೇಡಿ, ಅಂತರ್ಜಾತಿ ವಿವಾಹವಾಗಿ ಎಂದ ಸಿದ್ದರಾಮಯ್ಯ

ಅಧಿಕಾರ ಹಂಚಿಕೆ ಬಗ್ಗೆ ಸೋನಿಯಾ ಗಾಂಧಿಯಿಂದಲೇ ಬಂತು ಮಹತ್ವದ ಸಂದೇಶ

ಕುಸ್ತಿ ಕದನ ತಣ್ಣಗಾಗುತ್ತಲೇ ಸಿದ್ದರಾಮಯ್ಯಗೆ ಎದುರಾಗಿದೆ ಮತ್ತೊಂದು ಪರೀಕ್ಷೆ

Karnataka Weather: ಈ ವಾರ ಮಳೆ ಕಡಿಮೆ ಆದರೆ ತಾಪಮಾನ ಹೇಗಿರಲಿದೆ ನೋಡಿ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಮುಂದಿನ ಸುದ್ದಿ
Show comments