Publish Date: Mon, 04 Sep 2017 (18:31 IST)
Updated Date: Mon, 04 Sep 2017 (18:33 IST)
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಉಳಿಸಲು ಹೋರಾಟ ಮಾಡುತ್ತಿದ್ದೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಹರಪನಹಳ್ಳಿಯಲ್ಲಿ ಜೆಡಿಎಸ್ ಪಕ್ಷ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಹೆಚ್ಚಿನ ಕ್ಷೇತ್ರಗಳಲ್ಲಿ ಜಯಬೇರಿ ಬಾರಿಸಲಿದೆ ಎಂದು ತಿಳಿಸಿದ್ದಾರೆ.
ಮುಂಬರುವ ಚುನಾವಣೆಯ ನಂತರ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಈಗಾಗಲೇ ಭರವಸೆ ನೀಡಿದ್ದಾರೆ ಎಂದು ಹೇಳಿದರು
ಜೆಡಿಎಸ್ ಪಕ್ಷ ರೈತರ ಪರವಾಗಿ ಕಾರ್ಯನಿರ್ವಹಿಸುತ್ತದೆ. ರೈತರು ಆತ್ಮಹತ್ಯೆಗೆ ಶರಣಾಗುವ ಅವಶ್ಯಕತೆಯಿಲ್ಲ. ರೈತರೊಂದಿಗೆ ನಾವಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಯ ನೀಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.