Publish Date: Mon, 23 Jul 2018 (15:08 IST)
Updated Date: Mon, 23 Jul 2018 (15:12 IST)
ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ವರದಿಯಾಗಿದೆ. ರಾತ್ರೋರಾತ್ರಿ ಕಾಲೋನಿಗೆ ನುಗ್ಗಿ ಗಲಾಟೆ ನಡೆದಿದೆ. ಘಟನೆಯಲ್ಲಿ ಐದು ಬೈಕ್ ಗಳು ಜಖಂಗೊಂಡಿವೆ. ಅಲ್ಲದೇ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಸಧ್ಯ ಸ್ಥಳದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಯಿದೆ.
ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಯಡೇಹಳ್ಳಿಯಲ್ಲಿ ಎಸ್ ಸಿ ಹಾಗು ಎಸ್ ಟಿ ಸಮುದಾಯಗಳ ನಡುವೆ ಗಲಾಟೆ ನಡೆದಿದೆ. ಎಸ್ ಸಿ ಸಮುದಾಯದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ರಾತ್ರೋರಾತ್ರಿ ದಲಿತ ಕಾಲೋನಿಗೆ ನುಗ್ಗಿ ಗಲಾಟೆ ನಡೆಸಲಾಗಿದೆ. ಘಟನೆಯಲ್ಲಿ ಐದು ಬೈಕ್ ಗಳು ಜಖಂ, ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಬಳಿದಿರುವ ಆರೋಪ ಹಿನ್ನೆಲೆಯಲ್ಲಿ ಘರ್ಷಣೆ ನಡೆದಿದೆ. ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ.
ಎರಡು ಸಮುದಾಯಗಳಿಂದ ಹಲವಾಗಲು ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿವೆ. ಘಟನೆಯಲ್ಲಿ ಗಾಯಗೊಂಡ ನಾಲ್ವರು ತೆಲಗಿ ಹಾಗು ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.