Select Your Language

Notifications

webdunia
webdunia
webdunia
webdunia

ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲು

ಚಿಕ್ಕೋಡಿ , ಶುಕ್ರವಾರ, 31 ಮಾರ್ಚ್ 2023 (13:08 IST)
ಚಿಕ್ಕೋಡಿ : ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಕ್ಕಾಗಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲಾಗಿದೆ. ನಿಪ್ಪಾಣಿ ಮತಕ್ಷೇತ್ರದಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ.
 
ನೀತಿ ಸಂಹಿತೆ ಘೋಷಣೆಯ ಮೊದಲ ದಿನವೇ ಸಚಿವೆ ಶಶಿಕಲಾ ಜೊಲ್ಲೆ ಸಮ್ಮುಖದಲ್ಲೇ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ನಿಪ್ಪಾಣಿಯ ರಣರಾಗಿಣಿ ಮಹಿಳಾ ಮಂಡಳದಿಂದ ಅರಿಶಿನ ಕುಂಕುಮ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಚಿಹ್ನೆ ಹಾಗೂ ಲೋಕಸಭಾ ಸದಸ್ಯ ಅಣ್ಣಾಸಾಬ ಜೊಲ್ಲೆ ಅವರ ಫೋಟೋ ಬಳಕೆ ಮಾಡಲಾಗಿತ್ತು. 

ಈ ಕಾರ್ಯಕ್ರಮದಲ್ಲಿ 4-5 ಸಾವಿರ ಮಹಿಳೆಯರು ಭಾಗವಹಿಸಿದ್ದು, ಶಶಿಕಲಾ ಜೊಲೆ ಕೂಡಾ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನೀತಿಸಂಹಿತೆ ಉಲ್ಲಂಘನೆಯಾಗಿರುವ ಹಿನ್ನೆಲೆ ರಣರಾಗಿಣಿ ಮಹಿಳಾ ಮಂಡಳ ಅಧ್ಯಕ್ಷೆ ಹಾಗೂ ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಪಾರ್ಕ್‌ನಲ್ಲಿ ಕೂತಿದ್ದ ಯುವತಿಯನ್ನು ಹೊತ್ತೊಯ್ದು 8 ಗಂಟೆ ಗ್ಯಾಂಗ್‌ರೇಪ್!