Select Your Language

Notifications

webdunia
webdunia
webdunia
webdunia

ಬಳ್ಳಾರಿ ಪಾಲಿಕೆ ಸದಸ್ಯನ ವಿರುದ್ಧ FIR ದಾಖಲು

ಬಳ್ಳಾರಿ ಪಾಲಿಕೆ ಸದಸ್ಯನ ವಿರುದ್ಧ FIR ದಾಖಲು
ಬಳ್ಳಾರಿ , ಬುಧವಾರ, 30 ಆಗಸ್ಟ್ 2023 (15:42 IST)
ಬಳ್ಳಾರಿ ಪಾಲಿಕೆ ಸದಸ್ಯ ಸ್ನೇಹಿತನ ಪತ್ನಿಯ ಮೇಲೆ ಕಣ್ಣು ಹಾಕಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು. ಈ ಹಿನ್ನೆಲೆ ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯನ ಮೇಲೆ ಎಫ್ಐಆರ್ ದಾಖಲಾಗಿದೆ. ಬಳ್ಳಾರಿಯ 30ನೇ ವಾರ್ಡ್ ಕಾಂಗ್ರೆಸ್ ಸದಸ್ಯ ಎನ್ಎಂಡಿ ಆಸೀಫ್ ಬಾಷಾ ವಿರುದ್ದ ಎಫ್ಐಆರ್ ದಾಖಲಾಗಿದೆ. ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸೀಫ್ ಸ್ನೇಹಿತನ ಪತ್ನಿ ಮೇಲೆ ಕಣ್ಣು ಹಾಕಿದ್ದಾನೆ ಹಾಗೂ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಆಸೀಫ್ ಸ್ನೇಹಿತ ಅಹ್ಮದ್ ಹುಸೇನ್ ಎನ್ನುವವರು ಕೌಲ್ ಬಜಾರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದಾನೆ ಅಂತಾ ಅಹ್ಮದ್ ಆರೋಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಸಿಎಂ ಕುಮಾರಸ್ವಾಮಿಗೆ ತಡರಾತ್ರಿ ಸುಸ್ತು ಮತ್ತು ವೀಕ್ನೆಸ್ ಅಂತ ಆಸ್ಪತ್ರೆ ದಾಖಲು