Select Your Language

Notifications

webdunia
webdunia
webdunia
webdunia

BSY ವಿರುದ್ಧ FIR ದಾಖಲು

File FIR against bSY
bangalore , ಶನಿವಾರ, 17 ಸೆಪ್ಟಂಬರ್ 2022 (17:02 IST)
ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ.  ಯಡಿಯೂರಪ್ಪ ವಿರುದ್ಧ ಲೋಕಾಯುಕ್ತದಲ್ಲಿ FIR ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶದ ಮೇರೆಗೆ B.S.ಯಡಿಯೂರಪ್ಪ, B.Y.ವಿಜಯೇಂದ್ರ, ಕುಟುಂಬಸ್ಥರ ವಿರುದ್ಧ FIR ದಾಖಲಿಸಲಾಗಿದೆ. B.S.ಯಡಿಯೂರಪ್ಪ ಸಿಎಂ ಆಗಿದ್ದಾಗ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ರು.  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆಗಳನ್ನು ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕಂಪನಿಯಿಂದ ಕೋಟ್ಯಾಂತರ ರೂಪಾಯಿ ನಗದು ಪಡೆದಿದ್ದಾರೆ ಎಂದು ತಿಳಿಸಿತ್ತು. ಶೆಲ್ ಕಂಪನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂದು RTI ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ಖಾಸಗಿ ದೂರು ದಾಖಲಿಸಿದ್ದರು. ಆದರೆ ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ಜನಪ್ರತಿನಿಧಗಳ ವಿಶೇಷ ನ್ಯಾಯಾಲಯ ದೂರನ್ನ ವಜಾಗೊಳಿಸಿತ್ತು. ಬಳಿಕ ಟಿ.ಜೆ.ಅಬ್ರಾಹಂ ಇದನ್ನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ FIR ದಾಖಲಿಸಲು ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆ ಪ್ರಕರಣ ದಾಖಲಿಸಿ ವರದಿ ನೀಡುವಂತೆ ಲೋಕಾಯುಕ್ತಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚಿಸಿದೆ. ಹೀಗಾಗಿ FIR ದಾಖಲಿಸಿ ಲೋಕಾಯುಕ್ತ ತನಿಖೆಗೆ ಮುಂದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಡಿಶಾದಲ್ಲಿ ಅಪಘಾತ..!