Select Your Language

Notifications

webdunia
webdunia
webdunia
webdunia

ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ಶಶಿಕಲಾ ಜೊಲ್ಲೆ

ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ಶಶಿಕಲಾ ಜೊಲ್ಲೆ
bangalore , ಗುರುವಾರ, 16 ಸೆಪ್ಟಂಬರ್ 2021 (21:30 IST)
ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಖಾಲಿ ಇರುವ ಅರ್ಚಕ, ಸಹಾಯಕ ಅರ್ಚಕ, ಸ್ಥಾನಿಕ, ಪಾಚಕ, ಪರಿಚಾರಕ, ವೇದ ಪಾರಾಯಣ, ಪ್ರಬಂಧ ಪಾರಾಯಣ ಮಾಡುವವರ ಮುತಾಂದ ಹುದ್ದೆಗಳನ್ನು ಆದಷ್ಟು ಶೀಘ್ರದಲ್ಲಿ ಭತಿ೯ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಪ್ ಮತ್ತು ಹಜ್‍ ಸಚಿವರಾದ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ.
 
ಬುಧವಾರ ಚಾಮರಾಜಪೇಟೆಯ ಹಿಂದೂ ದೇವಾಲಯಗಳ ಅಖಿಲ ಕನಾ೯ಟಕ ಅಚ೯ಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರು  ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವರಾದ ಡಾ. ಅಶ್ವತ್ಥ್ ನಾರಾಯಣ ನೇತೃತ್ವದಲ್ಲಿ, ಅವರ ಕಚೇರಿಯಲ್ಲಿ ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆಯವರನ್ನು ಭೇಟಿ ಮಾಡಿ ಮನವಿ ಮಾಡಿದರು.
 
ಈ ಸಂದಭ೯ದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳನ್ನು ಕರೆಯಿಸಿ ಅವರೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ದೇವಸ್ಥಾನದ ಹೊರಾಂಗಣ ಮತ್ತು ಒಳಾಂಗಣಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೇ ಖಾಲಿ ಇರುವ ಹುದ್ದೆಗಳ ಭತಿ೯ಗೆ ಇರುವ ತಾಂತ್ರಿಕ ತೊಡಕುಗಳನ್ನು ಬಗೆಹರಿಸಿ ಶೀಘ್ರವೇ ಭತಿ೯ಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ, ಹಿಂದೂ ದೇವಾಲಯಗಳ ಅಖಿಲ ಕನಾ೯ಟಕ ಅಚ೯ಕ, ಆಗಮಿಕ, ಉಪಾದೀವಂತರ ಒಕ್ಕೂಟದ ಸದಸ್ಯರಿಗೆ  ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆಯವರು ಆದಷ್ಟು ಬೇಗ ನಿಮ್ಮ ಸಮಸ್ಯೆ ಪರಿಹರಿಸಿ ಕೊಡುವುದಾಗಿ ತಿಳಿಸಿದರು.
shashikalla jolle

Share this Story:

Follow Webdunia kannada

ಮುಂದಿನ ಸುದ್ದಿ

ಅರಮನೆಗೆ ಆಗಮಿಸಿರುವ ವಿಕ್ರಮ ಹಾಗೂ ಅಭಿಮನ್ಯು ಚೈತ್ರಳ ಜೊತೆ ಸರಸ