Publish Date: Mon, 10 Oct 2016 (19:59 IST)
Updated Date: Mon, 10 Oct 2016 (20:02 IST)
ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ರಿಯಾಲಿಟಿ ಶೋಗಳಲ್ಲಿ ಹೆಸರಾಂತ ನಟ-ನಟಿಯರು ಭಾಗಿಯಾಗುವುದರಿಂದ ಕನ್ನಡ ಸಿನಿಮಾಗಳು ನೆಲಕಚ್ಚುತ್ತಿವೆ ಎಂದು ಮಾನವ ಸರಪಳಿ ನಿರ್ಮಿಸುವ ಮೂಲಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ರಾಮನಗರದ ಬಿಡದಿ ಬಳಿ ಇರುವ ಇನೋವೇಟಿವ ಫಿಲಂ ಸಿಟಿ ಬಳಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಧ್ಯಕ್ಷ ಸಾ.ರಾ.ಗೋವಿಂದು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಾ.ರಾ.ಗೋವಿಂದು, ನಿರ್ಮಾಪಕರು ಬೀದಿಗೆ ಬಂದಿದ್ದಾರೆ. ಆದರೆ, ನಟ-ನಟಿಯರು ನಮ್ಮ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಈ ಕೂಡಲೇ ಎಲ್ಲಾ ನಟ-ನಟಿಯರು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಬಾರದೆಂದು ಆಗ್ರಹಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ