Webdunia - Bharat's app for daily news and videos

Install App

ವಿದ್ಯಾರ್ಥಿನಿಯರ ಅರೆನಗ್ನ ವೀಡಿಯೋಗಳ ಚಿತ್ರೀಕರಣ!

Webdunia
ಮಂಗಳವಾರ, 22 ನವೆಂಬರ್ 2022 (08:10 IST)
ಬೆಂಗಳೂರು : ವಿದ್ಯಾರ್ಥಿನಿಯರ ಅರೆನಗ್ನ ವೀಡಿಯೋಗಳನ್ನು ಚಿತ್ರೀಕರಣ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
 
ಬಂಧಿತನನ್ನು ಶುಭಂ ಎಂ ಆಜಾದ್ ಎಂದು ಗುರುತಿಸಲಾಗಿದೆ. ಈತ ಹೊಸಕೆರೆಹಳ್ಳಿ ಬಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿ.

ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಫಿಕ್ಸ್ ಮಾಡಿ ಕೃತ್ಯ ಎಸಗುತ್ತಿದ್ದ. ಹೀಗೆ 1,200 ಕ್ಕೂ ಅಧಿಕ ವೀಡಿಯೋ ಹಾಗೂ ಫೋಟೋ ಚಿತ್ರೀಕರಿಸಿದ್ದಾನೆ. ಸ್ನೇಹಿತೆಯರು ಜೊತೆಯಲ್ಲಿದ್ದಾಗಲೂ ಅವರ ಅರೆನಗ್ನ ಫೋಟೋ ತೆಗೆದಿದ್ದ.

ಇತ್ತೀಚೆಗೆ ಕಾಲೇಜು ಶೌಚಾಲಯದಲ್ಲಿ ಕ್ಯಾಮೆರಾ ಅಳವಡಿಸಲು ಹೋದಾಗ ಯುವತಿಯರು ಚೀರಾಡಿದ್ದಾರೆ. ಈ ವೇಳೆ ಆರೋಪಿ ಪರಾರಿಯಾಗಿದ್ದ. ಬಳಿಕ ಸಿಸಿಟಿವಿ ಪರಿಶೀಲನೆ ವೇಳೆ ಶುಭಂ ಕೃತ್ಯ ಬೆಳಕಿಗೆ ಬಂದಿದೆ. ಈ ಹಿಂದೆಯೂ ಇದೇ ರೀತಿ ಮಾಡಿ ಕ್ಷಮೆಯಾಚನೆ ಬರೆದುಕೊಟ್ಟಿದ್ದ. 

ಇದೀಗ ಮತ್ತೆ ತನ್ನ ಚಾಳಿ ಮುಂದುವರಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತನ ಮೊಬೈಲ್ ನಲ್ಲಿ 1,200 ಕ್ಕೂ ಅಧಿಕ ವೀಡಿಯೋ ಹಾಗೂ ಫೋಟೋಗಳು ಪತ್ತೆಯಾಗಿವೆ. ಆರೋಪಿ ಬಳಿ ಮತ್ತೊಂದು ಮೊಬೈಲ್ ಇದ್ದು ಅದರಲ್ಲಿ ಮತ್ತಷ್ಟು ವೀಡಿಯೋಗಳು ಪತ್ತೆಯಾಗುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ