ಅಂತೂ ಬಾಯಿ ಬಿಟ್ರು ಡಿಕೆ ಶಿವಕುಮಾರ್: ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ದೊಡ್ಡ ಹೇಳಿಕೆ

ಕೃಷ್ಣವೇಣಿ ಕೆ
ಶುಕ್ರವಾರ, 29 ಮೇ 2026 (11:21 IST)
ಬೆಂಗಳೂರು: ಕಳೆದ ಮೂರು-ನಾಲ್ಕು ದಿನಗಳಿಂದ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಮೌನ ತಾಳಿದ್ದ ಡಿಕೆ ಶಿವಕುಮಾರ್ ಇದೀಗ ಕೊನೆಗೂ ಮೊದಲ ಬಾರಿ ತುಟಿ ತೆರೆದಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಸಿದ್ದರಾಮಯ್ಯ ಬಗ್ಗೆ ಹಾಡಿಹೊಗಳಿದ್ದಾರೆ. ದೇವರು ಅವಕಾಶ ಮಾತ್ರ ಕೊಡುತ್ತಾನೆ ಎನ್ನುವ ಮೂಲಕ ಸಿದ್ದರಾಮಯ್ಯನವರನ್ನು ಹೊಗಳಿದ್ದಾರೆ.

‘ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು.

ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಬೆಳೆದು, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನನ್ನ ಆತ್ಮೀಯರಾದ ಶ್ರೀ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಜನಮಾನಸದಲ್ಲಿ ನೆಲೆಸಿರುವ ಅವರು, ಭಾರತೀಯ ರಾಜಕಾರಣದ ಧೀಮಂತ ನಾಯಕ.

ಜನಪರ ಯೋಜನೆಗಳಿಂದ ಹಿಡಿದು ರಾಜ್ಯದಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ. ಸುಮಾರು ಐವತ್ತು ವರ್ಷಗಳ ಅವರ ಅಗಾಧ ರಾಜಕೀಯ ಅನುಭವ, ಸಾಮಾಜಿಕ ಕಳಕಳಿ ಮತ್ತು ಜನಪರ ಯೋಜನೆಗಳು ಸದಾ ಸ್ಮರಣೀಯ. 2020ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆಯ್ಕೆಯಾದ ದಿನದಿಂದಲೂ ಇಂದಿನವರೆಗೆ, ಸಿದ್ದರಾಮಯ್ಯನವರು ನನ್ನ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಸಂಘಟನೆಯಲ್ಲಿ ಜೊತೆಯಾಗಿ ನಿಂತಿದ್ದಾರೆ.

ಅವರ ಆಡಳಿತದಲ್ಲಿ ನಾನು ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಮಾರ್ಗದರ್ಶನ ಪಡೆದುಕೊಂಡಿದ್ದು ನನ್ನ ಭಾಗ್ಯ. ಮುಂದಿನ ದಿನಗಳಲ್ಲೂ ರಾಜ್ಯದ ಹಿತದೃಷ್ಟಿಯಿಂದ ಹಾಗೂ ನಮ್ಮ ಪಕ್ಷದ ಬಲವರ್ಧನೆಗೆ ಅವರ ಮಾರ್ಗದರ್ಶನ, ಹಿರಿಯ ಅನುಭವ ನಮಗೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತೇನೆ. ಕರ್ನಾಟಕದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ ನಡೆಯೋಣ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ: ಇಲ್ಲಿದೆ ಪಟ್ಟಿ

ಡಿಕೆ ಶಿವಕುಮಾರ್ ಸಿಎಂ ಆದರೆ ಸತೀಶ್ ಜಾರಕಿಹೊಳಿಗೆ ಈ ಸ್ಥಾನವಂತೂ ಖಚಿತ

ಮುಂಬೈನ ಡಾಬಾದಲ್ಲಿ ರೊಟ್ಟಿಗೆ ಉಗುಳಿ ಗ್ರಾಹಕರಿಗೆ ನೀಡುತ್ತಿದ್ದ ಭೂಪ ಅರೆಸ್ಟ್: Video

ರೈಲಿನ ಕಿಟಿಕಿಯಿಂದಲೇ ಕನ್ನ ಹಾಕಲು ಹೋದ ಖದೀಮ ಮಹಿಳೆಯರ ಕೈಲಿ ಸಿಕ್ಕಿ ಹಾಕಿಕೊಂಡು ಕತೆ ಏನಾಯ್ತು ನೋಡಿ Video

ಸಿಎಂ ಸ್ಥಾನಕ್ಕೇರುವ ಮೊದಲೇ ಡಿಕೆ ಶಿವಕುಮಾರ್ ಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments