Select Your Language

Notifications

webdunia
webdunia
webdunia
webdunia

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಕೊನೆಗೂ ಗುಡ್ ನ್ಯೂಸ್: ಇಂದೇ ನಿಮ್ಮ ಖಾತೆ ಚೆಕ್ ಮಾಡಿ

Lakshmi Hebbalkar-Siddaramaiah

Krishnaveni K

ಬೆಂಗಳೂರು , ಮಂಗಳವಾರ, 6 ಆಗಸ್ಟ್ 2024 (14:43 IST)
ಬೆಂಗಳೂರು: ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆ ಹಣ ಖಾತೆಗೆ ಬಂದಿಲ್ಲ ಎಂದು ಬೇಸತ್ತಿದ್ದ ಮಹಿಳೆಯರಿಗೆ ಕೊನೆಗೂ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇಂದೇ ನಿಮ್ಮ ಖಾತೆಯನ್ನು ಚೆಕ್ ಮಾಡಿಕೊಳ್ಳಿ ಎಂದಿದೆ.

ಮಾಧ್ಯಮಗಳ ಮುಂದೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದಿನಿಂದಲೇ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಕ್ರೆಡಿಟ್ ಆಗಲಿದೆ ಎಂದಿದ್ದಾರೆ. ಹೀಗಾಗಿ ಇಂದೇ ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ಚೆಕ್ ಮಾಡಬಹುದು. ಜೂನ್ ಮತ್ತು ಜುಲೈ ತಿಂಗಳ ಎರಡು ಕಂತು ಇನ್ನೂ ಬಂದಿರಲಿಲ್ಲ.

ಈಗ ಎರಡೂ ತಿಂಗಳ ಹಣ ಒಟ್ಟಿಗೇ ಫಲಾನುಭವಿ ಮಹಿಳೆಯರ ಖಾತೆಗೆ ಬರಲಿದೆ. ನಿನ್ನೆಯಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಅನುದಾನ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದೀಗ ತಕ್ಷಣವೇ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಕೆಲಸ ಮಾಡಲಾಗುತ್ತಿದೆ.

ಗೃಹಲಕ್ಷ್ಮಿ ಹಣ ಬರದೇ ಕಳೆದ ಕೆಲವು ದಿನಗಳಿಂದ ರಾಜ್ಯ ಸರ್ಕಾರದ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿಬಂದಿತ್ತು. ಗ್ಯಾರಂಟಿ ಯೋಜನೆ ಬೋಗಸ್ ಎನ್ನಲಾಗಿತ್ತು. ಸಿಎಂ, ಡಿಸಿಎಂ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಲ್ಲೇ ಹೋದರೂ ಗೃಹಲಕ್ಷ್ಮಿ ಹಣ ಯಾವಾಗ ಬರುತ್ತದೆ ಎಂಬ ಪ್ರಶ್ನೆ ಕೇಳುತ್ತಲೇ ಇದ್ದರು. ಇದೀಗ ಕೊನೆಗೂ ಹಣ ಜಮೆಯಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ತಲೆಯಲ್ಲಿ ಹೇನು: ಪಕ್ಕದಲ್ಲಿ ಕೂತಿದ್ದವನು ಮಾಡಿದ್ದೇನು ಗೊತ್ತಾ