Publish Date: Thu, 09 Apr 2026 (16:22 IST)
Updated Date: Thu, 09 Apr 2026 (16:24 IST)
ಬೆಂಗಳೂರು: ಕಾದು ಕುಳಿತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು, ರಾಜ್ಯಕ್ಕೆ ಯಾವ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ ಎಂದು ಕುತೂಹಲ ಮೂಡಿಸಿದೆ. ಇನ್ನೂ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕವನ್ನು ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ದಿಶಾ ಪಡೆದು, ರಾಜ್ಯಕ್ಕೆ ಟಾಪರ್ ಆಗಿದ್ದಾರೆ.
ಮಲ್ಲೇಶ್ವರಂನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಇಂದು ಸಂಜೆ 6:15ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಈ ವೇಳೆ ಅವರು ರಾಜ್ಯದ ಒಟ್ಟಾರೆ ಉತ್ತೀರ್ಣ ಪ್ರಮಾಣ, ಜಿಲ್ಲಾವಾರು ಸಾಧನೆ ಹಾಗೂ ಟಾಪರ್‌ಗಳ ಪಟ್ಟಿಯನ್ನು ಅಧಿಕೃತವಾಗಿ ಹೇಳಲಿದ್ದಾರೆ.
ಇನ್ನೂ ಕಳೆದ ವರ್ಷ ರಾಜ್ಯಕ್ಕೆ ಪ್ರಥಮ ಸ್ಥಾನ ಉಡುಪಿ ಬಂದಿದ್ದರೆ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನಕ್ಕೆ ತಳ್ಳಲ್ಲಟ್ಟಿತ್ತು. ಈ ಬಾರಿ ಯಾವ ಜಿಲ್ಲೆ ಅಗ್ರಸ್ಥಾನ ಪಡೆಯಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ.