ಬೆಂಗಳೂರು: ಬಿಜೆಪಿ ಮರು ಸೇರ್ಪಡೆ ವದಂತಿ ಬೆನ್ನಲ್ಲೇ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಮತ್ತು ಮಗ-ಸೊಸೆ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ.
ಕೆಎಸ್ ಈಶ್ವರಪ್ಪ ಹಾಗೂ ಅವರ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ವಕೀಲ ವಿನಯ್ ಎಂಬವರು ಖಾಸಗಿ ದೂರು ನೀಡಿದ್ದರು. ಅದರಂತೆ ಕೋರ್ಟ್ ಲೋಕಾಯುಕ್ತರಿಗೆ ಪ್ರಕರಣ ದಾಖಲಿಸಿಕೊಳ್ಳಲು ಸೂಚನೆ ನೀಡಿತ್ತು. ಅದರಂತೆ ಈಗ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ದೂರಿಗೆ ಸಂಬಂಧಪಟ್ಟಂತೆ ದಾಖಲೆ ಸಲ್ಲಿಸಲು ಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ಇಂದೇ ವಿನಯ್ ತಮ್ಮ ದೂರಿಗೆ ಸಂಬಂಧಪಟ್ಟ ದಾಖಲೆಗಳನ್ನು ಕೋರ್ಟ್ ಮುಂದೆ ಸಲ್ಲಿಸಬೇಕಾಗುತ್ತದೆ. ಈಗಾಗಲೇ ಬಿಜೆಪಿಗೆ ಮರು ಸೇರ್ಪಡೆಯಾಗಲು ಈಶ್ವರಪ್ಪ ಹೊರಟಿರುವ ಬೆನ್ನಲ್ಲೇ ಅವರ ವಿರುದ್ಧ ಇಂತಹ ದೂರು ಬಂದಿರುವುದು ವಿಪರ್ಯಾಸ.