ಕಲಬುರಗಿ ನಗರದ ಚೆಕ್ ಪೋಸ್ಟ್ ಬಳಿ ಶನಿವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತಕ್ಕೂ ಅಧಿಕ ಜನರ ವಿರುದ್ಧ FIR ದಾಖಲಾಗಿದೆ. ಬಸಯ್ಯಾ ಗುತ್ತೇದಾರ, ದಸ್ತಯ್ಯಾ ಗುತ್ತೇದಾರ, ರಾಜು, ಶಾಂತಿಬಾಯಿ ಸೇರಿದಂತೆ ಹತ್ತಕ್ಕೂ ಅಧಿಕ ಜನರ ವಿರುದ್ಧ ನಗರದ ಸಬ್-ಅರ್ಬನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೈ ಭವಾನಿ ಮರಾಠ ಖಾನಾವಳಿ ಸ್ಥಳದ ವಿವಾದಕ್ಕೆ ಸಂಬಂಧಿಸಿದಂತೆ ಫೈರಿಂಗ್ ನಡೆದಿತ್ತು. ಕಾಂಗ್ರೆಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸಂತೋಷ್ ಪಾಟೀಲ್ ಸಹೋದರ ಚನ್ನವೀರ ಪಾಟೀಲ್ ಮೇಲೆ ಗುಂಡಿನ ದಾಳಿ ನಡೆದಿತ್ತು. ಘಟನೆಯಲ್ಲಿ ಚನ್ನವೀರ ಕೈಗೆ ಗುಂಡು ತಗುಲಿದ್ದು, ಅಬ್ಬುಬೂಕರ್ ಎಂಬವರ ಕಾಲಿಗೂ ಗುಂಡು ಹೊಕ್ಕಿತ್ತು. ದುಷ್ಕರ್ಮಿಗಳು ಬೊಲೆರೊ ವಾಹನದಲ್ಲಿ ಬಂದು ಗುಂಡಿನ ದಾಳಿ ನಡೆಸಿ, ವಾಹನವನ್ನು ಅಲ್ಲೆ ಬಿಟ್ಟು ಪರಾರಿಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಸಬ್-ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.