Webdunia - Bharat's app for daily news and videos

Install App

10ಕ್ಕೂ ಅಧಿಕ ಜನರ ವಿರುದ್ಧ FIR

Webdunia
ಭಾನುವಾರ, 8 ಜನವರಿ 2023 (18:13 IST)
ಕಲಬುರಗಿ ನಗರದ ಚೆಕ್ ಪೋಸ್ಟ್ ಬಳಿ ಶನಿವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತಕ್ಕೂ ಅಧಿಕ ಜನರ ವಿರುದ್ಧ FIR ದಾಖಲಾಗಿದೆ. ಬಸಯ್ಯಾ ಗುತ್ತೇದಾರ, ದಸ್ತಯ್ಯಾ ಗುತ್ತೇದಾರ, ರಾಜು, ಶಾಂತಿಬಾಯಿ ಸೇರಿದಂತೆ ಹತ್ತಕ್ಕೂ ಅಧಿಕ ಜನರ ವಿರುದ್ಧ ನಗರದ ಸಬ್-ಅರ್ಬನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೈ ಭವಾನಿ ಮರಾಠ ಖಾನಾವಳಿ ಸ್ಥಳದ ವಿವಾದಕ್ಕೆ ಸಂಬಂಧಿಸಿದಂತೆ ಫೈರಿಂಗ್ ನಡೆದಿತ್ತು. ಕಾಂಗ್ರೆಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸಂತೋಷ್ ಪಾಟೀಲ್ ಸಹೋದರ ಚನ್ನವೀರ ಪಾಟೀಲ್ ಮೇಲೆ ಗುಂಡಿನ ದಾಳಿ ನಡೆದಿತ್ತು. ಘಟನೆಯಲ್ಲಿ ಚನ್ನವೀರ ಕೈಗೆ ಗುಂಡು ತಗುಲಿದ್ದು, ಅಬ್ಬುಬೂಕರ್ ಎಂಬವರ ಕಾಲಿಗೂ ಗುಂಡು ಹೊಕ್ಕಿತ್ತು. ದುಷ್ಕರ್ಮಿಗಳು ಬೊಲೆರೊ ವಾಹನದಲ್ಲಿ ಬಂದು ಗುಂಡಿನ ದಾಳಿ ನಡೆಸಿ, ವಾಹನವನ್ನು ಅಲ್ಲೆ ಬಿಟ್ಟು ಪರಾರಿಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಸಬ್-ಅರ್ಬನ್ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments