Daily Horoscope

Select Your Language

Notifications

webdunia
webdunia
webdunia
webdunia

ಮೌಂಟ್ ಕಾರ್ಮೆಲ್ ಕಾಲೇಜು ವಿರುದ್ಧ FIR..!

FIR against Mount Carmel College
ಪ್ರತಿಷ್ಠಿತ ಮೌಂಟ್ ಕಾರ್ಮೆಲ್ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಪೊಲೀಸರು ಎಫ್​ಐಆರ್ ಸಹ ಮಾಡಿದ್ದಾರೆ. ಅನುಮತಿ‌ ಇಲ್ಲದೆ ಸಾವಿರಾರು ಮಂದಿಯನ್ನು ಸೇರಿಸಿ ಕಾಲೇಜು ಈವೆಂಟ್ ಆಯೋಜಿಸಿದ್ದ ಆರೋಪವನ್ನು ಆಡಳಿತ ಮಂಡಳಿ ವಿರುದ್ಧ ಹೊರಿಸಲಾಗಿದೆ. ಈವೆಂಟ್​ನಲ್ಲಿ ಸುಮಾರು 10 ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈವೆಂಟ್​ಗೆ ಸೇರಿದ್ದ ಕೆಲವರು ಕಾಲೇಜು ವಿದ್ಯಾರ್ಥಿಗಳನ್ನು ಅಶ್ಲೀಲ ಶಬ್ದಗಳಿಂದ ನಿಂದಿಸಿ ಗಲಾಟೆ ಮಾಡಲು ಯತ್ನಿಸಿದ್ದರು. ಮೌಂಟ್ ಕಾರ್ಮಲ್ ಕಾಲೇಜಿನಿಂದ ನಡೆದಿದ್ದ ಈವೆಂಟ್​ಗಾಗಿ ಪ್ರತಿ ವಿದ್ಯಾರ್ಥಿಗೆ 20 ಪಾಸ್​ಗಳನ್ನು ನೀಡಲಾಗಿತ್ತು. ಈ ಪಾಸ್​ಗಳನ್ನು ಕೆಲ ವಿದ್ಯಾರ್ಥಿಗಳು ಮಾರಿಕೊಂಡಿದ್ದರು. ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಇತರ ಕಾಲೇಜುಗಳ ವಿದ್ಯಾರ್ಥಿಗಳೂ ಈವೆಂಟ್​ಗೆ ಬಂದಿದ್ದರು. ಪೂರ್ವಾನುಮತಿ ಪಡೆಯದೇ ಈವೆಂಟ್ ಆಯೋಜಿಸಿದ್ದರಿಂದ ಏಕಾಏಕಿ ಜನಸಂದಣಿ ಮತ್ತು ವಾಹನ ದಟ್ಟಣೆ ಹೆಚ್ಚಾಗಿ ಟ್ರಾಫಿಕ್ ಜಾಮ್ ಸಹ ಉಂಟಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಠಾಣೆ ಸಬ್​ಇನ್​ಸ್ಪೆಕ್ಟರ್ ಸಚಿನ್ ನೀಡಿದ್ದ ದೂರಿನ ಅನ್ವಯ ಎಫ್​ಐಆರ್ ದಾಖಲು ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ