ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಹೊಸ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ರಾಹುಲ್ ಹಾಗೂ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಬಿಜೆಪಿಯ ದ್ವೇಷ ರಾಜಕೀಯದ ಮುಂದುವರಿದ ಭಾಗವಾಗಿದೆ ಎಂದರು.
'ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಲು ಸಾಂಸ್ಥಿಕ ಸಂಸ್ಥೆಗಳನ್ನು ಪದೇ ಪದೇ ಬಳಕೆ ಮಾಡಿದಾಗ ಅದು ನಮ್ಮ ಪ್ರಜಾಪ್ರಭುತ್ವದ ಅಡಿಪಾಯವನ್ನೇ ದುರ್ಬಲಗೊಳಿಸುತ್ತದೆ. ಬೆದರಿಕೆ ಹಾಕುವ ಈ ಸ್ವರೂಪ ಬಿಜೆಪಿಯವರ ಭಯವನ್ನು ತೋರಿಸುತ್ತದೆ ವಿನಾ ಧೈರ್ಯವನ್ನಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ತಮ್ಮ ಸಂದಿಗ್ಧ ಪರಿಸ್ಥಿತಿಯಲ್ಲಿ ತಮ್ಮ ಬದುಕನ್ನೇ ದೇಶದ ಸಾರ್ವಜನಿಕ ಸೇವೆಗೆ ಮುಡಿಪಾಗಿಟ್ಟಿರುವ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರೊಂದಿಗೆ ನಾವು ಅಚಲವಾಗಿ ನಿಲ್ಲುತ್ತೇವೆಂದು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.