ರಾಹುಲ್, ಸೋನಿಯಾ ವಿರುದ್ಧ ಎಫ್‌ಐಆರ್‌: ಬಿಜೆಪಿಯಿಂದ ದ್ವೇಷ ರಾಜಕಾರಣ ಎಂದ ಸಿದ್ದರಾಮಯ್ಯ

Sampriya
ಸೋಮವಾರ, 1 ಡಿಸೆಂಬರ್ 2025 (17:29 IST)
ಬೆಂಗಳೂರು: ನ್ಯಾಷನಲ್ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧ ದಾಖಲಾಗಿರುವ ಹೊಸ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. 

ರಾಹುಲ್ ಹಾಗೂ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದು ಬಿಜೆಪಿಯ ದ್ವೇಷ ರಾಜಕೀಯದ ಮುಂದುವರಿದ ಭಾಗವಾಗಿದೆ ಎಂದರು. 

'ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕಲು ಸಾಂಸ್ಥಿಕ ಸಂಸ್ಥೆಗಳನ್ನು ಪದೇ ಪದೇ ಬಳಕೆ ಮಾಡಿದಾಗ ಅದು ನಮ್ಮ ಪ್ರಜಾಪ್ರಭುತ್ವದ ಅಡಿಪಾಯವನ್ನೇ ದುರ್ಬಲಗೊಳಿಸುತ್ತದೆ. ಬೆದರಿಕೆ ಹಾಕುವ ಈ ಸ್ವರೂಪ ಬಿಜೆಪಿಯವರ ಭಯವನ್ನು ತೋರಿಸುತ್ತದೆ ವಿನಾ ಧೈರ್ಯವನ್ನಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. 

ತಮ್ಮ ಸಂದಿಗ್ಧ ಪರಿಸ್ಥಿತಿಯಲ್ಲಿ ತಮ್ಮ ಬದುಕನ್ನೇ ದೇಶದ ಸಾರ್ವಜನಿಕ ಸೇವೆಗೆ ಮುಡಿಪಾಗಿಟ್ಟಿರುವ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರೊಂದಿಗೆ ನಾವು ಅಚಲವಾಗಿ ನಿಲ್ಲುತ್ತೇವೆಂದು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments