Webdunia - Bharat's app for daily news and videos

Install App

ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್‌: ಇದು ಬೆದರಿಕೆಯೊಡ್ಡುವ ಸಿಎಂ ತಂತ್ರ ಎಂದ ವಿಜಯೇಂದ್ರ

Sampriya
ಭಾನುವಾರ, 17 ನವೆಂಬರ್ 2024 (12:20 IST)
ಬೆಂಗಳೂರು: ತಮ್ಮ ಹಾಗೂ ಕುಟುಂಬದ ಭ್ರಷ್ಟಾಚಾರ ಬಯಲು ಮಾಡಿ ನ್ಯಾಯಾಲಯದಲ್ಲಿ ಹೋರಾಡುತ್ತಿರುವ ಸಾಮಾಜಿಕ ಕಾರ್ಯಕರ್ತರೊಬ್ಬರನ್ನು (ಸ್ನೇಹಮಯಿ ಕೃಷ್ಣ) ಹಣಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹಿಂಬಾಲಕರನ್ನು ಬಿಟ್ಟು ಸುಳ್ಳು ದೂರುಗಳನ್ನು ಕೊಡಿಸಿ ಬೆದರಿಕೆಯೊಡ್ಡುವ ತಂತ್ರ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ಮುಡಾ ಹಗರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ‌ ಕೃಷ್ಣ ಬಂಧನ ಹಾಗೂ ಗಡಿಪಾರಿಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಶನಿವಾರ ಇಲ್ಲಿನ ಲಕ್ದ್ಮಿಪುರಂ ಠಾಣೆಯಲ್ಲಿ ಮತ್ತೊಂದು ದೂರು ದಾಖಲಿಸಿದ್ದಾರೆ.  ಈ ಸಂಬಂಧ ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು,  ತಮ್ಮ ಹಾಗೂ ಕುಟುಂಬದ ಭ್ರಷ್ಟಾಚಾರ ಬಯಲು ಮಾಡಿ ನ್ಯಾಯಾಲಯದಲ್ಲಿ ಹೋರಾಡುತ್ತಿರುವ ಸಾಮಾಜಿಕ ಕಾರ್ಯಕರ್ತರೊಬ್ಬರನ್ನು (ಸ್ನೇಹಮಯಿ ಕೃಷ್ಣ)ಹಣಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ತಮ್ಮ ಹಿಂಬಾಲಕರನ್ನು ಬಿಟ್ಟು ಸುಳ್ಳು ದೂರುಗಳನ್ನು ಕೊಡಿಸಿ ಬೆದರಿಕೆಯೊಡ್ಡುವ ತಂತ್ರ ಅನುಸರಿಸುತ್ತಿದ್ದಾರೆ.

ಪೊಲೀಸ್ ಬಲ ಪ್ರಯೋಗಿಸಿ ಇಂತಹ ಆಧಾರ ರಹಿತ ದೂರುಗಳನ್ನು ದಾಖಲಿಸಿಕೊಂಡು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸಂವಿಧಾನಾತ್ಮಕ ದಾರಿಯಲ್ಲಿ ಹೋರಾಡುತ್ತಿರುವ ಕಾರ್ಯಕರ್ತರೊಬ್ಬರನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ. ಇದು ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ನವರ ಹತಾಶೆಯ ಎಲ್ಲೆ ಮೀರಿದ ದೌರ್ಜನ್ಯವನ್ನು ಪ್ರತಿಬಿಂಬಿಸುತ್ತದೆ.

ತೋಳ್ಬಲ ಹಾಗೂ ಅಧಿಕಾರ ಬಲವನ್ನು ಪ್ರಯೋಗಿಸಿ ಒಬ್ಬ ಜನಪರ ಕಾಳಜಿಯ ಸಾಮಾನ್ಯ ಪ್ರಜೆಯ ಹೋರಾಟದ ಹಕ್ಕನ್ನು ದಮನ ಮಾಡುವ ನೀಚ ಬೆಳವಣಿಗೆ ಇದಾಗಿದೆ. ಬಿಜೆಪಿ ಇದನ್ನು ಅತ್ಯುಗ್ರವಾಗಿ ಖಂಡಿಸುತ್ತದೆ. ಸುಳ್ಳು ದೂರು, ಬೆದರಿಕೆಗಳು ಮುಂದುವರೆದಲ್ಲಿ ಸಾಮಾಜಿಕ ಕಾರ್ಯಕರ್ತರ ರಕ್ಷಣೆಗೆ ಬಿಜೆಪಿ ನಿಲ್ಲಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

ಮುಂದಿನ ಸುದ್ದಿ
Show comments