Publish Date: Fri, 18 Feb 2022 (11:24 IST)
Updated Date: Fri, 18 Feb 2022 (11:52 IST)
ತುಮಕೂರು : ಸೆಕ್ಷನ್ 144 ಉಲ್ಲಂಘಿಸಿದ ತುಮಕೂರಿನ ಎಂಪ್ರೆಸ್ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಬುಧವಾರ ಹಾಗೂ ಗುರುವಾರ ಎಂಪ್ರೆಸ್ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯರು ಹಿಜಬ್ ವಿಚಾರವಾಗಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಹೆಸರನ್ನು ಉಲ್ಲೇಖಿಸಿದೇ 15 ವಿದ್ಯಾರ್ಥಿನಿಯರ ಮೇಲೆ ಎಫ್ಐಆರ್ ದಾಖಲಾಗಿದೆ.