Publish Date: Tue, 05 Mar 2024 (19:20 IST)
Updated Date: Tue, 05 Mar 2024 (19:30 IST)
ಮಂಡ್ಯ :ಬಿಜೆಪಿ ಕಾರ್ಯಕರ್ತರ ವಿರುದ್ದ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪದ ಮಂಡ್ಯದ ಕನ್ನಂಬಾಡಿ ಕುಮಾರ್ ಎಂಬ ವ್ಯಕ್ತಿ ಎಫ್‌ಐಆರ್ ದಾಖಲಿಸಿದ್ದಾರೆ. 2022 ರ ಡಿ. 18 ರಂದು ಮಂಡ್ಯದ ಸಂಜಯ್ ಸರ್ಕಲ್ ಎಂಬಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಕುಮಾರ್ ಒತ್ತಾಯಿಸಿದ್ದಾರೆ.
ಈ ವಿಡಿಯೋವನ್ನು ನಾನು ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇನೆ. ಸಮಾಜದಲ್ಲಿ ಶಾಂತಿ ಕದಡುವ ಈ ಪ್ರಯತ್ನವನ್ನು ನೋಡಿ ನಾನು ವಿಚಲಿತಗೊಂಡಿದ್ದೇನೆ. ಉಪ್ಪರಕನಹಳ್ಳಿ ಆರಾಧ್ಯ ಮತ್ತು ಡಣಾಯಕನಹಳ್ಳಿ ರವಿ ಎಂಬುವವರು ಈ ಘೋಷಣೆಗಳನ್ನು ಕೂಗಿದ್ದು, ಅವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಕುಮಾರ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಎಫ್‌ಐಆರ್ ದಾಖಲಿಸಿಕೊಂಡಿರುವ ಮಂಡ್ಯ ಠಾಣೆಯ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಭವನಕ್ಕೆ ಅತಿಕ್ರಮಣ ಪ್ರವೇಶ ಹಾಗೂ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ 27 ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಳಗಾವಿ ಬಿಜೆಪಿ ಘಟಕದ ನಗರ ಅಧ್ಯಕ್ಷೆ ಗೀತಾ ಉಮಾಕಾಂತ ಸುತಾರ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಗೇಂದ್ರಗೌಡ ಪಾಟೀಲ ಸೇರಿ 27 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 143, 147, 341, 283, 448 ಹಾಗೂ 149 ಅಡಿ 27 ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಾಗಿದೆ