Select Your Language

Notifications

webdunia
webdunia
webdunia
webdunia

ಹಲ್ಲೆ ಆರೋಪ: ಬಿಜೆಪಿ ಶಾಸಕ ರಾಜು ಕಾಗೆ ಸೇರಿದಂತೆ 13 ಜನರ ವಿರುದ್ಧ ಎಫ್‌ಐಆರ್

ಹಲ್ಲೆ ಆರೋಪ:  ಬಿಜೆಪಿ ಶಾಸಕ ರಾಜು ಕಾಗೆ ಸೇರಿದಂತೆ 13 ಜನರ ವಿರುದ್ಧ ಎಫ್‌ಐಆರ್
ಬೆಳಗಾವಿ , ಸೋಮವಾರ, 9 ಜನವರಿ 2017 (17:23 IST)
ಕಾಂಗ್ರೆಸ್ ನಾಯಕನ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ರಾಜು ಕಾಗೆ ಸೇರಿದಂತೆ 13 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
 
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ, ಪುತ್ರಿ ಕೃತಿಕಾ ಕಾಗೆ, ಸಹೋದರ ಶಿವಗೊಂಡ ಕಾಗೆ, ವಾಹನ ಚಾಲಕ ಬಾಹುಬಲಿ ಸೇರಿದಂತೆ ಒಟ್ಟು 13 ಜನರ ವಿರುದ್ಧ ಐಪಿಸಿ ಸೆಕ್ಷೆನ್ 143, 147, 148, 307, 302, 323, 354 ಅಡಿಯಲ್ಲಿ ಕಾಗವಾಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
ಫೇಸ್‌ಬುಕ್‌ನಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕನ ಮನೆಗೆ ನುಗ್ಗಿ ಬಿಜೆಪಿ ಶಾಸಕ ರಾಜು ಕಾಗೆ ಪುತ್ರಿ ಹಾಗೂ ಟೀಂ ಡೆಡ್ಲಿ ಅಟ್ಯಾಕ್ ಮಾಡಿದ ಘೋರ ಕೃತ್ಯ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಉಗಾರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿತ್ತು. 
 
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಅವರ ರೌಡಿ ಗ್ಯಾಂಗ್, ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿದ್ದ ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಮಹಿಳೆ ಮಕ್ಕಳು ಎನ್ನುವುದನ್ನು ನೋಡದೆ ಅಟ್ಟಹಾಸ ಮೆರೆದಿದ್ದು, ಈ ಭೀಭತ್ಸ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಗೂಂಡಾಗಿರಿ ಪ್ರಕರಣ: ಬಿಜೆಪಿ ಶಾಸಕರೆಂದರೇ ಸಿಎಂಗೆ ಭಯಾನಾ? ಎಂದ ಪೂಜಾರಿ