ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸಂಸದ ನಳಿನ್‌ಕುಮಾರ್ ಕಟೀಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯಾಯತ್ನವನ್ನು ವಿರೋಧಿಸಿ ಹಿಂದು ಸಂಘಟನೆಗಳು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದವು. ಪ್ರತಿಭಟನೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸಂಸದ ನಳಿನ್‌ಕುಮಾರ್ ಕಟೀಲ್, ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಪಟ್ಟಣದಲ್ಲಿ ನಿಷೇಧಾಜ್ಞೆ ಹೇರಿದ್ದರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರಿಂದ ಕರಂದ್ಲಾಜೆ ಮತ್ತು ಕಟೀಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.