Publish Date: Sun, 10 Dec 2017 (11:15 IST)
Updated Date: Sun, 10 Dec 2017 (11:23 IST)
ಬೆಂಗಳೂರು: ಪತ್ರಕರ್ತ ರವಿ ಬೆಳಗೆರೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ರವಿ ಬೆಳಗೆರೆ ಕಚೇರಿಯಲ್ಲಿ ಜಿಂಕೆ ಚರ್ಮ, ಆಮೆ ಚಿಪ್ಪು ಪತ್ತೆಯಾದ ಹಿನ್ನೆಲೆ ಅರಣ್ಯ ಅಧಿಕಾರಿಗಳು ಎಫ್ ಐ ಆರ್ ದಾಖಲಿಸಿದ್ದಾರೆ.
ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಪ್ರಕರಣ, ಬೆಳಗೆರೆ ಕಚೇರಿ ಪರಿಶೀಲನೆ ವೇಳೆ ಕಚೇರಿಯಲ್ಲಿ ಜಿಂಕೆ ಚರ್ಮ, ಆಮೆ ಚಿಪ್ಪು ಪತ್ತೆಯಾಗಿತ್ತು. ಈ ಕುರಿತು ಸಿಸಿಬಿ ಪೊಲೀಸರು ಅರಣ್ಯ ಇಲಾಖೆಗೆ ಪತ್ರ ಬರೆದಿದ್ದರು. ಸಿಸಿಬಿ ಕಚೇರಿಗೆ ಆಗಮಿಸಿ ಅರಣ್ಯ ಅಧಿಕಾರಿಗಳು ಜಿಂಕೆ ಚರ್ಮ ಮತ್ತು ಆಮೆ ಚಿಪ್ಪನ್ನು ವಶಪಡಿಸಿಕೊಂಡಿದ್ದಾರೆ. ಬೆಳಗೆರೆ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ