Select Your Language

Notifications

webdunia
webdunia
webdunia
webdunia

ಅಗ್ನಿಶಾಮಕ ಇಲಾಖೆ: ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಅರ್ಜಿ ಆಹ್ವಾನ

ಅಗ್ನಿ ಶಾಮಕ
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹೀಗಂತ ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ  ಕಲಬುರಗಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿಶಾಮಕ ಠಾಣಾಧಿಕಾರಿಗಳ 36 ಹುದ್ದೆಗಳು, ಅಗ್ನಿಶಾಮಕ ಚಾಲಕರ 227 ಹುದ್ದೆಗಳು, ಚಾಲಕ ತಂತ್ರಜ್ಞರ 82 ಹುದ್ದೆಗಳು ಹಾಗೂ ಅಗ್ನಿಶಾಮಕರ 1222 ಹುದ್ದೆಗಳು ಸೇರಿದಂತೆ ಒಟ್ಟು 1567 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 

ಅಭ್ಯರ್ಥಿಗಳು www.ksp.gov.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಜುಲೈ 20 ರೊಳಗಾಗಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್‍ನ್ನು ಸಂಪರ್ಕಿಸಬಹುದು.


Share this Story:

Follow Webdunia kannada

ಮುಂದಿನ ಸುದ್ದಿ

ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ : ನಿಷೇಧಾಜ್ಞೆ