Publish Date: Tue, 07 Aug 2018 (14:43 IST)
Updated Date: Tue, 07 Aug 2018 (14:45 IST)
ತಾಲೂಕು ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಚೇರಿಯ ಕಂಪ್ಯೂಟರ್ ಗಳು ಅಲ್ಲದೇ ಸರಕಾರಿ ದಾಖಲಾತಿಗಳು ಸುಟ್ಟು ಕರಕಲಾಗಿವೆ.
ದೇವದುರ್ಗದ ತಾಲೂಕು ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. 8 ನೇ ಕೊಠಡಿಯಲ್ಲಿ ಕಾಣಿಸಿಕೊಂಡ ಬೆಂಕಿಗೆ ದಾಖಲಾತಿಗಳು ಸುಟ್ಟು ಭಸ್ಮವಾಗಿವೆ. ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಪಹಣಿ ವಿತರಿಸುತ್ತಿದ್ದ ಕೊಠಡಿಗೆ ಬೆಂಕಿ ತಗಲಿದೆ. ಹಲವಾರು ದಾಖಲೆಗಳು ಹಾಗೂ ಕಂಪ್ಯೂಟರ್ ಸುಟ್ಟಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದರು. ತಡರಾತ್ರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಕಚೇರಿಯಲ್ಲಿ ಬೆಂಕಿ ಹತ್ತಿಕೊಂಡ ಸುದ್ದಿ ತಿಳಿದರೂ ಸ್ಥಳಕ್ಕೆ ತಹಸೀಲ್ದಾರ್ ಶಿವಶರಣಪ್ಪ ಕಟುವಳ್ಳಿ ಶೀಘ್ರವಾಗಿ ಬರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ದೇವದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.