Publish Date: Thu, 14 Dec 2017 (09:52 IST)
Updated Date: Thu, 14 Dec 2017 (09:57 IST)
ಕೊಪ್ಪಳ: ಹೋಟೆಲ್ ವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆಯೊಂದು ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ.
ಈ ಹೋಟೆಲ್ ವೆಂಕಟೇಶ್ವರರಾಮ್ ಎಂಬುವವರಿಗೆ ಸೇರಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿಸಲಾಗಿದೆ. ಹೋಟೆಲ್ ಪಕ್ಕದಲ್ಲಿರುವ ಕಟ್ಟಿಂಗ್ ಶಾಪ್ ಗೂ ಈ ಬೆಂಕಿ ಆವರಿಸಿದೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ರಚರಣೆಯಲ್ಲಿ ತೊಡಗಿದ್ದಾರೆ. ಸ್ಥಳಕ್ಕೆ ಗಂಗಾವತಿ ನಗರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ