Publish Date: Mon, 12 Nov 2018 (18:48 IST)
Updated Date: Mon, 12 Nov 2018 (18:52 IST)
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಚಪ್ಪಲಿ ಅಂಗಡಿಯೊಂದಕ್ಕೆ ತಗುಲಿದ ಬೆಂಕಿ ಭಾರಿ ಅನಾಹುತ ಸೃಷ್ಟಿಮಾಡಿದೆ.
ಚಪ್ಪಲಿ ಅಂಗಡಿಗೆ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ನಡೆದಿದೆ.
ಸಂತೋಷ ಮೇತ್ರಿ ಎಂಬುವರಿಗೆ ಸೇರಿದ ಅಂಗಡಿ ಇದಾಗಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಪೋಲಿಸರು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ರಾಯಭಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.