Publish Date: Sun, 11 Nov 2018 (18:32 IST)
Updated Date: Sun, 11 Nov 2018 (18:34 IST)
ಕಿಡಿಗೇಡಿಗಳಿಂದ ಆಟೋ ರಿಕ್ಷಾಗೆ ಬೆಂಕಿ ಬಿದ್ದ ಘಟನೆ ನಡೆದಿದೆ. ಕಿಡಿಗೇಡಿಗಳ ಕೆಲಸದಿಂದ ಸುಟ್ಟು ಕರಕಲಾದ ಆಟೊರಿಕ್ಷಾ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪ ಗ್ರಾಮದಲ್ಲಿ ಸುಂಟಿಕೊಪ್ಪದ ಶಿವಮಣಿ ಎಂಬವರಿಗೆ ಸೇರಿದ ಆಟೊಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ.
ಮನೆಯ ಮುಂದೆ ನಿಲ್ಲಿಸಿದ್ದ ಆಟೋಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.
ಆಟೋಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನ ಬಂಧಿಸುವಂತೆ ಒತ್ತಾಯ ಕೇಳಿಬಂದಿದೆ. ಆಟೊ ಚಾಲಕರಿಂದ ಸುಂಟಿಕೊಪ್ಪದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕೂಡಲೇ ಆರೋಪಿಗಳನ್ನು ಬಂಧಿಸದಿದ್ದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.