Publish Date: Thu, 11 Apr 2019 (18:00 IST)
Updated Date: Thu, 11 Apr 2019 (18:01 IST)
ಕಬ್ಬಿನ ಗದ್ದೆಗೆ ಬಿದ್ದ ಬೆಂಕಿ ಆ ಬೆಳೆಗಾರನ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿದೆ.
ಎರಡು ಎಕರೆ ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಬೆಲೆಯ ಕಬ್ಬು ಸುಟ್ಟು ಭಸ್ಮವಾಗಿದೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಹೊರ ವಲಯದ ಸೊಡ್ಡಿ ರಸ್ತೆಯಲ್ಲಿರುವ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ.
ಎರಡು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಕರಕಲಾಗಿದೆ. ಶ್ರೀಕಾಂತ ಭರ್ಮಪ್ಪ ಮುತ್ತಿನ ಅವರಿಗೆ ಸೇರಿದ ಕಬ್ಬಿನ ಗದ್ದೆ ಇದಾಗಿದೆ. ಘಟನೆಯಲ್ಲಿ ರೈತನಿಗೆ ಲಕ್ಷಾಂತರ ರೂ. ಹಾನಿ ಸಂಭವಿಸಿದೆ. ಚಡಚಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.