Publish Date: Sat, 04 Aug 2018 (15:56 IST)
Updated Date: Sat, 04 Aug 2018 (15:58 IST)
ಆಕಸ್ಮಿಕವಾಗಿ ತಗುಲಿದ ಬೆಂಕಿಗೆ ಕೈಗಾರಿಕೆ ಪ್ರದೇಶದಲ್ಲಿರುವ ಪೇಯಿಂಟ್ ತಯಾರಿಕೆ ಘಟಕ ಆಹುತಿಯಾಗಿ, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ಬೆಂಗಳೂರು ಹೊರವಲಯದಲ್ಲಿರುವ ಆನೇಕಲ್ ತಾಲ್ಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿರುವಂತಹ ಕಲರ್ ಟೆಕ್ ಪ್ರಾಡೆಕ್ಟ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಗೆ ತಡರಾತ್ರಿ ಆಕಸ್ಮಿಕ ಬೆಂಕಿ ತಗುಲಿದೆ. ಬೆಂಕಿಗೆ ಕಾರ್ಖಾನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಪೇಯಿಂಟ್ ಮತ್ತು ಸಾಕಷ್ಟು ಉಪಕರಣಗಳು ಆಹುತಿ ಆಗಿದೆ.
ಬೆಂಕಿಯನ್ನು ನಂದಿಸಲು ಮೂರು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಈ ಘಟನೆ ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಜಿಗಣಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.