Select Your Language

Notifications

webdunia
webdunia
webdunia
webdunia

ಕೊಲೆ ಆರೋಪಿ ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್

ಕೊಲೆ ಆರೋಪಿ ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್
ಬೆಂಗಳೂರು , ಮಂಗಳವಾರ, 3 ಮಾರ್ಚ್ 2020 (11:04 IST)
ಬೆಂಗಳೂರು : ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಕೊಲೆ ಆರೋಪಿ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.


ರೌಡಿಶೀಟರ್ ಯೂನಿಸ್ ಗುಂಡೇಟು ತಿಂದ ಆರೋಪಿ. ಈತ ಕಳೆದ ವಾರ ತನ್ನ ಗ್ಯಾಂಗ್ ಜೊತೆ ಸೇರಿ ಅಮ್ಚಾದ್ ಮೇಲೆ  ಲಾಂಗು ಮಚ್ಚಿನಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಹಿನ್ನಲೆಯಲ್ಲಿ ಡಿಜೆ ಹಳ್ಳಿ ಪೊಲೀಸರು ಆರೋಪಿ ಯೂನಿಸ್ ನನ್ನು ಬಂಧಿಸಿದ್ದರು.


ಆದರೆ ಇಂದು ಮುಂಜಾನೆ ಕೊಲೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲು ಸ್ಥಳಕ್ಕೆ ಕರೆದುಕೊಂಡು ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಆ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಇದೀಗ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆ; ತುರ್ತು ಸಭೆ ನಡೆಸಿದ ಆರೋಗ್ಯ ಸಚಿವರು