Daily Horoscope

ಬೆಂಗಳೂರಿನಲ್ಲಿ ಪತಿಯ ಮೇಲೆ ಪತ್ನಿಯಿಂದಲೇ ಶೂಟೌಟ್

Webdunia
ಶುಕ್ರವಾರ, 5 ಮೇ 2017 (19:30 IST)
ಪತಿ ಮತ್ತು ಪತ್ನಿಯ ಮಧ್ಯದ ಜಗಳ ವಿಕೋಪಕ್ಕೆ ತೆರಳಿದಾಗ ಪತ್ನಿ ತನ್ನ ಪತಿಯ ಮೇಲೆ ಮೂರು ಸುತ್ತು ಫೈರಿಂಗ್ ನಡೆಸಿದ ಘಟನೆ ಎಲೆಕ್ಟ್ರಾನಿಕ್ಸ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 
ಎಚ್‌ಎಸ್‌ಆರ್‌ಲೇಔಟ್‌ನ ನಿವಾಸಿಗಳಾದ ದಂಪತಿ ಸಾಯಿರಾಮ್ ಮತ್ತು ಹಂಸಾ ಇಂದು ಕಾರಿನಲ್ಲಿ ತೆರಳುತ್ತಿರುವಾಗ ವಾದ ವಾಗ್ವಾದ ವಿಕೋಪಕ್ಕೆ ತೆರಳಿದೆ. ಇದರಿಂದ ಬೇಸತ್ತ ಪತಿ ಕಾರಿನಿಂದಿಳಿದು ಬಿಎಂಟಿಸಿ ಬಸ್ ಹತ್ತಿದ್ದಾನೆ.
 
ಬಸ್ ಹಿಂಬಾಲಿಸಿಕೊಂಡ ಪತ್ನಿ ಹಂಸಾ, ವೀರಸಂದ್ರಾ ಸಿಗ್ನಲ್ ಬಳಿ ಬಸ್‌‍ನ್ನು ಅಡ್ಡಗಟ್ಟಿ ತಡೆದಿದ್ದಾಳೆ.  ಬಸ್‌ನಿಂದ ಕೆಳಗಿಳಿದು ಬಂದ ಪತಿ ಸಾಯಿರಾಮ್ ಮೇಲೆ ರಿವಾಲ್ವರ್‌ನಿಂದ ಮೂರು ಸುತ್ತು ಗುಂಡು ಹಾರಿಸಿದ್ದಾಳೆ. ಒಂದು ಗುಂಡು ಆತನ ಎದೆಯ ಭಾಗಕ್ಕೆ ತಗುಲಿ ಗಂಭೀರವಾಗಿ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿ ಮಹಿಳೆ ಹಂಸಾಳನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

]ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments