Webdunia - Bharat's app for daily news and videos

Install App

ಹುಬ್ಬಳ್ಳಿಯಲ್ಲಿ ರೌಡಿ​​​​​​​​​​​​​ ಮೇಲೆ ಫೈರಿಂಗ್​​​

Webdunia
ಭಾನುವಾರ, 26 ನವೆಂಬರ್ 2023 (17:41 IST)
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ರೌಡಿಗಳ ಅಟ್ಟಹಾಸ ಮುಂದುವರಿದಿದೆ. ಮೊನ್ನೆಯಷ್ಟೇ ಬೆಳ್ಳಂಬೆಳಗ್ಗೆ ರೌಡಿಶೀಟರ್​​​ಗಳ ಮನೆಗಳ ಮೇಲೆ ದಾಳಿ ನಡೆಸಿದ್ದ ಪೊಲೀಸರು ಕಟ್ಟುನಿಟ್ಟಿನ ಎಚ್ಚರಿಕೆ ಕೊಟ್ಟಿದ್ದರು. ಇದರ ಹೊರತಾಗಿಯೂ ಬಂಧಿಸಲು ಹೋದ ಪೊಲೀಸರ ಮೇಲೆ ರೌಡಿಶೀಟರ್ ತಲ್ವಾರ್ ನಿಂದ ಬೀಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ರೌಡಿಶೀಟರ್ ಮೇಲೆ ಫೈಯರ್ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ನಟೋರಿಯಸ್ ರೌಡಿ ಮೇಲೆ ಪೊಲೀಸ್ ಇನ್​​ಸ್ಪೆಕ್ಟರ್ ಫೈರ್ ಮಾಡಿದ್ದಾರೆ.

ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ಮಂಟೂರು ರಸ್ತೆಯಲ್ಲಿ ಸತೀಶ್ ಗೋನಾ ಮೇಲೆ ಫೈರಿಂಗ್ ಮಾಡಲಾಗಿದೆ. ಶಹರ ಠಾಣೆ ಇನ್​​​ಸ್ಪೆಕ್ಟರ್ ರಫೀಕ್ ತಹಶಿಲ್ದಾರ ಫೈರ್ ಮಾಡಿದ್ದಾರೆ. ಹೆಂಡತಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸತೀಶ್ ಗೋನಾನನ್ನು ಪೊಲೀಸರು ಬಂಧಿಸಲು ಹೋದಾಗ ತಲ್ವಾರ್ ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ಪಿ.ಎಸ್.ಐ ವಿನೋದ್ ದೊಡ್ಡಲಿಂಗಣ್ಣವರ್ ಎಂಬವರಿಗೆ ಗಾಯಗಳಾಗಿವೆ. ಈ ವೇಳೆ ಆರೋಪಿ ಕಾಲಿಗೆ ಫೈರ್ ಮಾಡಿ, ಆರೋಪಿಯನ್ನು ಬಂಧಿಸಿದ್ದಾರೆ. ಮೂರು ಸುತ್ತು ಗುಂಡು ಹಾರಿಸಲಾಗಿದ್ದು, ಒಂದು ಗುಂಡು ಆರೋಪಿಯ ಕಾಲಿಗೆ ತಗುಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments