Select Your Language

Notifications

webdunia
webdunia
webdunia
webdunia

ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್​

Firing on Sri Ram Sena district president
ಬೆಳಗಾವಿ , ಭಾನುವಾರ, 8 ಜನವರಿ 2023 (19:46 IST)
ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಶ್ರೀರಾಮ ಸೇನೆ ಸಂಘಟನೆ ಮುಖಂಡರ ಮೇಲೆ ಫೈರಿಂಗ್ ಮಾಡಿ ಪರಾರಿಯಾಗಿರುವ ಘಟನೆ ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್, ಕಾರು ಚಾಲಕ ಮನೋಜ್ ದೇಸೂರಕರ ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿಯಿಂದ ಕುಸಿದುಬಿದ್ದ ಮುಖಂಡರನ್ನು ಸ್ಥಳೀಯರ ನೆರವಿನಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಡಾ. M.B ಬೋರಲಿಂಗಯ್ಯ, ಫೈರಿಂಗ್​ಗೆ ಏನು ಕಾರಣ ಎಂಬುದು ಗೊತ್ತಾಗಿಲ್ಲ. ಈ ಬಗ್ಗೆ ತನಿಖೆಗೆ ಈಗಾಗಲೇ ನಾಲ್ಕು ತಂಡಗಳನ್ನು ರಚಿಸಿದ್ದು, ಆದಷ್ಟು ಬೇಗ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಸಾರ್ವಜನಿಕರು ಯಾರೂ ವದಂತಿಗಳಿಗೆ ಕಿವಿಗೊಡದೇ ಶಾಂತವಾಗಿರಬೇಕು. ಮುಂಜಾಗ್ರತಾ ಕ್ರಮವಾಗಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಕೈಗೊಂಡಿದ್ದೇವೆ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಚಿತ್ರಗಳು ಮನಸ್ಸಿನ ಭಾವನೆಗಳ ಅಭಿವ್ಯಕ್ತಿ- ಸಿಎಂ