Select Your Language

Notifications

webdunia
webdunia
webdunia
webdunia

ಮೊದಲ ದಿನದ ಸಿಇಟಿ: ಜೀವಶಾಸ್ತ್ರಕ್ಕೆ 80.48%, ಗಣಿತಕ್ಕೆ 93.90% ಅಭ್ಯರ್ಥಿಗಳು ಹಾಜರಿ

ಮೊದಲ ದಿನದ ಸಿಇಟಿ: ಜೀವಶಾಸ್ತ್ರಕ್ಕೆ 80.48%, ಗಣಿತಕ್ಕೆ 93.90% ಅಭ್ಯರ್ಥಿಗಳು ಹಾಜರಿ
bangalore , ಶನಿವಾರ, 28 ಆಗಸ್ಟ್ 2021 (21:13 IST)
ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಶನಿವಾರ ನಡೆದ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೊದಲ ದಿನ ಯಶಸ್ವಿಯಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ,ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. 
 
ಪರೀಕ್ಷೆಗೆ ನೋಂದಣಿ ಮಾಡಿಸಿದ್ದ ಒಟ್ಟು 2,01,834 ಅಭ್ಯರ್ಥಿಗಳಲ್ಲಿ, 1,62,439 (80.48%) ಅಭ್ಯರ್ಥಿಗಳು ಜೀವಶಾಸ್ತ್ರ ವಿಷಯಕ್ಕೆ ಮತ್ತು 1,89,522  (92.90%) ಅಭ್ಯರ್ಥಿಗಳು ಗಣಿತ ವಿಷಯಕ್ಕೆ ಹಾಜರಾಗಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ. 
 
530 ಪರೀಕ್ಷಾ ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮತ್ತು ಬೆಂಗಳೂರಿನಲ್ಲಿ ಬಿಬಿಎಂಪಿ ಸಹಯೋಗದೊಂದಿಗೆ ಎಲ್ಲಾ ಸುರಕ್ಷತೆಯ ಕ್ರಮವನ್ನು ಖಾತರಿಪಡಿಸಿಕೊಂಡು ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
 
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೊರಡಿಸಿರುವ ಎಸ್ಓಪಿ ಅನುಸಾರ ಕೋವಿಡ್-19 ಪಾಸಿಟೀವ್ ಅಭ್ಯರ್ಥಿಗಳಿಗೆ ಸಿಇಟಿ ಪರೀಕ್ಷೆಯನ್ನು ಬರೆಯಲು ಅವಕಾಶ ಕಲ್ಪಿಸಿದ್ದು, ರಾಜ್ಯದ ವಿವಿಧ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆಯನ್ನು ಮಾಡಿ ಪರೀಕ್ಷೆಯನ್ನು ನಡೆಸಲಾಗಿದೆ. ಜೀವಶಾಸ್ತ್ರ ವಿಷಯಕ್ಕೆ 09 ಮತ್ತು ಗಣಿತ ವಿಷಯಕ್ಕೆ 12 ಕೋವಿಡ್ ಪಾಸಿಟಿವ್ ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಅವರು ಸಚಿವರು ತಿಳಿಸಿದ್ದಾರೆ. 
 
ನಾಳೆ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳಿಗೆ ನಿಗದಿತ ವೇಳಾಪಟ್ಟಿಯಂತೆ ಸಿಇಟಿ ಪರೀಕ್ಷೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
cet

Share this Story:

Follow Webdunia kannada

ಮುಂದಿನ ಸುದ್ದಿ

ಜಮೀನು ವಿವಾದ: ಒಂದೇ ಕುಟುಂಬದ ನಾಲ್ವರು ಸೋದರರ ಹತ್ಯೆ