Publish Date: Thu, 25 Jun 2020 (21:09 IST)
Updated Date: Thu, 25 Jun 2020 (21:11 IST)
ಗುಲ್ಬರ್ಗಾ ವಿಶ್ವವಿದ್ಯಾಲಯ ಪ್ರದೇಶದ ಹಿಂಭಾಗದಲ್ಲಿರುವ ನಾಲ್ವರ ಮೇಲೆ ಕೇಸ್ ಫೈಲ್ ಆಗಿದೆ.
ಕ್ವಾರಂಟೈನ್‍ಗೆ ಸಂಬಂಧಿಸಿದಂತೆ ಸರ್ಕಾರದ ಆದೇಶ ಪಾಲನೆ ಮಾಡದೇ ಹೊರಗಡೆ ತಿರುಗಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಕಲಬುರಗಿ ತಾಲೂಕಿನ ಕುಸನೂರ ಗ್ರಾಮದ 4 ವ್ಯಕ್ತಿಗಳ ವಿರುದ್ಧ ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಲಾಗಿದೆ.
ಕಲಬುರಗಿ ತಾಲೂಕಿನ ಇಟಗಾ (ಕೆ) ಗ್ರಾಮದ ಓರ್ವ ವ್ಯಕ್ತಿಯನ್ನು ಹೋಂ ಕ್ವಾರಂಟೈನ್‍ದಿಂದ ಸಾಂಸ್ಥಿಕ ಕ್ವಾರಂಟೈನ್‍ಗೆ ಸ್ಥಳಾಂತರಿಸಲಾಗಿದೆ.
ಸರ್ಕಾರದ ಆದೇಶ ಪಾಲನೆ ಮಾಡದೇ ಹೊರಗಡೆ ತಿರುಗಾಡುತ್ತಿರುವುದು ಕಂಡು ಬಂದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಎಫ್.ಐ.ಆರ್. ದಾಖಲಿಸಿ ಕಾನೂನಿನ ಕ್ರಮ ಕೈಗೊಳ್ಳಲಾಗುವುದಲ್ಲದೇ ಅವರಿಗೆ ಮತ್ತೆ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.