Select Your Language

Notifications

webdunia
webdunia
webdunia
webdunia

ನಾಳೆಯಿಂದ ಸಿಎಂ ಬಸವರಾಜ ಬೊಮ್ಮಾಯಿಗೆ ಮೊದಲ ಅಧಿವೇಶನ

ನಾಳೆಯಿಂದ ಸಿಎಂ ಬಸವರಾಜ ಬೊಮ್ಮಾಯಿಗೆ ಮೊದಲ ಅಧಿವೇಶನ
ಬೆಂಗಳೂರು , ಭಾನುವಾರ, 12 ಸೆಪ್ಟಂಬರ್ 2021 (11:27 IST)
ಬೆಂಗಳೂರು : ವಿಧಾನಮಂಡಲದ ಮಳೆಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ನಡೆಯುತ್ತಿರುವ ಮೊದಲ ವಿಧಾನಮಂಡಲ ಅಧಿವೇಶನ ಇದಾಗಿದೆ. ರಾಜ್ಯದ ಹಲವು ಜ್ವಲಂತ ಸಮಸ್ಯೆಗಳ ವಿಚಾರದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿದ್ದು, ಇದನ್ನು ಎದುರಿಸಲು ಆಡಳಿತಪಕ್ಷ ಕೂಡ ಸಿದ್ಧವಾಗಿದೆ. ಈಗಾಗಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿದ್ದು, ಅಧಿವೇಶನದಲ್ಲಿ ಚರ್ಚಿಸುವ ವಿಷಯಗಳ ಕುರಿತು ಸಮಾಲೋಚನೆ ನಡೆಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬ್ರಿಟಿಷರ ನಂತರ ನ್ಯಾಯಾಂಗಕ್ಕೆ ಉತ್ತಮ ಮೂಲಸೌಕರ್ಯ ಕಡೆಗಣಿಸಲಾಗಿದೆ: ಸಿಜೆಐ ರಮಣ