Publish Date: Mon, 27 Nov 2023 (19:23 IST)
Updated Date: Mon, 27 Nov 2023 (19:18 IST)
ಮೂವರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ದಂಪತಿಯೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತುಮಕೂರು ನಗರದಲ್ಲಿ ನಡೆದಿದೆ.
ಪತಿ ಗರೀಬ್ ಸಾಬ್, ಪತ್ನಿ ಸುಮಯ್ಯ, ಮಗಳು ಹಜೀನಾ, ಗಂಡು ಮಕ್ಕಳಾದ ಮೊಹ್ಮದ್ ಶಬೀರ್, ಮೊಹಮದ್ ಮುನೀರ್ ಮೃತರು. ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ಎರಡು ಪುಟಗಳ ಡೆತ್ನೋಟ್ನಲ್ಲಿ ಉಲ್ಲೇಖಿಸಲಾಗಿದೆ. ಹಾಗೇ ಆತ್ಮಹತ್ಯೆಗೂ ಮೊದಲು ವಿಡಿಯೋ ಸಹ ಮಾಡಿದ್ದು, ಆ ವಿಡಿಯೋದಲ್ಲಿ ಐವರ ಹೆಸರಗಳನ್ನು ಹೇಳಿದ್ದಾರೆ. ಇದೀಗ ಪೊಲೀಸರು ಆ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.