Select Your Language

Notifications

webdunia
webdunia
webdunia
webdunia

ಒಂದೇ ದಿನ ಐವರು ಕೊರೊನಾ ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್

ಒಂದೇ ದಿನ ಐವರು ಕೊರೊನಾ ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್
ಕಲಬುರಗಿ , ಶುಕ್ರವಾರ, 22 ಮೇ 2020 (19:04 IST)
ಐವರು ಕೊರೋನಾ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

 ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ  ಐವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕಲಬುರಗಿ ನಗರದ ಮೋಮಿನಪುರ ಪ್ರದೇಶದ 41 ವರ್ಷದ ಪುರುಷ (P-604) ಮತ್ತು ಗಾಜೀಪುರ ಪ್ರದೇಶದ 52 ವರ್ಷದ ಪುರುಷ (P-679) ಮಹಾಮಾರಿ ಕೊರೋನಾ ರೋಗದಿಂದ ವಾಸಿಯಾದವರು.

ಕಲಬುರಗಿ ನಗರದ ಕರೀಂ ನಗರದ 35 ವರ್ಷದ ಯುವಕ (P-697), ಇಸ್ಲಾಮಾಬಾದ ಕಾಲೋನಿಯ 36 ವರ್ಷದ ಮಹಿಳೆ(P-698) ಮತ್ತು 41 ವರ್ಷದ ಪುರುಷ ವ್ಯಕ್ತಿ(P-699) ಮಹಾಮಾರಿ ಕೊರೋನಾ ಸೋಂಕಿನ ವಿರುದ್ಧ ಹೋರಾಡಿ ರೋಗದಿಂದ ವಾಸಿಯಾದವರು.

ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ‌ ಪೀಡಿತ 134 ರೋಗಿಗಳಲ್ಲಿ 7 ಜನ ನಿಧನ‌ರಾಗಿದ್ದು, 60 ರೋಗಿ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ‌. ಉಳಿದಂತೆ 67 ರೋಗಿಗಳಿಗೆ ಚಿಕಿತ್ಸೆ‌ ಮುಂದುವರೆದಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಕ್ಕೆ ಕಂಟಕವಾಗುತ್ತಿರುವ ಮುಂಬೈ : ಈ ಜಿಲ್ಲೆಯಲ್ಲಿ 9 ಕೋವಿಡ್ ಕೇಸ್