Select Your Language

Notifications

webdunia
webdunia
webdunia
webdunia

ಪಂಚರಾಜ್ಯ ಚುನಾವಣೆ ಮತ ಎಣಿಕೆ ಆರಂಭ: ಗದ್ದುಗೆ ಯಾರಿಗೆ? ಸ್ಪಷ್ಟ ಚಿತ್ರಣ ಸಾಧ್ಯತೆ

ಪಂಚರಾಜ್ಯ ಚುನಾವಣೆ ಮತ ಎಣಿಕೆ ಆರಂಭ: ಗದ್ದುಗೆ ಯಾರಿಗೆ?  ಸ್ಪಷ್ಟ ಚಿತ್ರಣ ಸಾಧ್ಯತೆ
bangalore , ಗುರುವಾರ, 10 ಮಾರ್ಚ್ 2022 (21:04 IST)
ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದು ಹೇಳಲಾಗುತ್ತಿರುವ ಐದು ರಾಜ್ಯಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದ್ದು,  ಸ್ಪಷ್ಟ ಚಿತ್ರಣಗಳು ಲಭ್ಯವಾಗುವ ಸಾಧ್ಯತೆಗಳಿವೆ.
ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರ ಹಾಗೂ ಪಂಜಾಬ್ ರಾಜ್ಯಗಳಲ್ಲಿ ನಡೆದ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಈ ಚುನಾವಣೆಗಳ ಫಲಿತಾಂಶಗಳು ಅತ್ಯಂತ ಮಹತ್ವದ್ದಾಗಿದೆ.
ಹೀಗಾಗಿ ಸಾಕಷ್ಟು ರಾಜಕೀಯ ಹೈಡ್ರಾಮಗಳಿಗೆ ವೇದಿಯಾಗಿದ್ದ ಪಂಜಾಬ್ ಫಲಿತಾಂಶ ಸಾಕಷ್ಟು ಕುತೂಹಲ ಕೆರಳಿಸಿದೆ.
ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮತ ಎಣಿಕೆ ಏಣಿಕೆ ಕೇಂದ್ರಗಳ ಸುತ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10 ರಿಂದ ಮಾರ್ಚ್ 7 ರವರೆಗೆ 7 ಹಂತಗಳಲ್ಲಿ ನಡೆದ ವಿಧಾನಸಭಾ ಚುನಾವಣೆ. 403 ಕ್ಷೇತ್ರಗಳಲ್ಲಿ ಇರುವ ಒಟ್ಟು 4,441 ಅಭ್ಯರ್ಥಿಗಳ ಭವಿಷ್ಯವನ್ನು ಇಂದಿನ ಫಲಿತಾಂಶ ನಿರ್ಧರಿಸುತ್ತದೆ.
ಪಂಜಾಬ್ ಚುನಾವಣೆಯಲ್ಲಿ ಒಟ್ಟು 117 ಕ್ಷೇತ್ರಗಳಲ್ಲಿ 1304 ಅಭ್ಯರ್ಥಿಗಳು, ಈ ಬಾರಿ ಪಂಜಾಬ್ ಮತದಾರರ ಮತದಾನಕ್ಕೆ ಹೆಚ್ಚು ಉತ್ಸಾಹ ತೋರಿದ್ದು ಕಂಡು ಬಂದಿರಲಿಲ್ಲ.
ಗೋವಾ ರಾಜ್ಯವು ಫೆ.14 ರಂದು ಒಂದೇ ಹಂತದಲ್ಲಿ ಮತ ಚಲಾಯಿಸಿತು. ಗೋವಾದಲ್ಲಿ 40 ಸ್ಥಾನಗಳಿದ್ದು, 332 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್-ಜಿಎಫ್‌ಪಿ ತಲಾ 40 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ, ಆಮ್ ಆದ್ಮಿ ಪಕ್ಷದಿಂದ 39 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಉತ್ತರಾಖಂಡ ವಿಧಾನಸಭೆಯ 70 ಸ್ಥಾನಗಳ ಮತ ಎಣಿಕೆಗೆ ಪೂರಕ. ಒಟ್ಟು 632 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮಣಿಪುರದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, 60 ಸ್ಥಾನಗಳ ವಿಧಾನಸಭೆಗೆ 265 ಅಭ್ಯರ್ಥಿಗಳು ಇದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರ ಪ್ರದೇಶ ಅಂಚೆ ಮತ ಎಣಿಕೆ: ಆರಂಭದಲ್ಲಿ ಬಿಜೆಪಿ ಮುನ್ನಡೆ