ಸವದತ್ತಿ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ವಾಪಾಸ್ಸಾಗುತ್ತಿದ್ದಾಗ ಅಪಘಾತ: ಐವರು ಸಾವು

Sampriya
ಭಾನುವಾರ, 9 ಮಾರ್ಚ್ 2025 (17:04 IST)
ಚಿತ್ರದುರ್ಗ: ತಾಲ್ಲೂಕಿನ ತಮಟಗಲ್ಲು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂತಿದ್ದ ಲಾರಿಗೆ ಇನ್ನೊವಾ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಇನ್ನೂ ಭೀಕರ ರಸ್ತೆ ಅಪಘಾತದಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ (60), ರುದ್ರಸ್ವಾಮಿ (52), ಮಲ್ಲಿಕಾರ್ಜುನ (50), ಚಿದಂಬರಾಚಾರ್‌ (50) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಇನ್ನೊಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

‌ಎಲ್ಲರೂ ಸವದತ್ತಿ ರೇಣುಕಾ ಯಲ್ಲಮ್ಮ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆದು ವಾಪಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ‌

ಬೆಂಗಳೂರು ಕಡೆಗೆ ಚಲಿಸುತ್ತಿದ್ದ ತಮಿಳುನಾಡು ಮೂಲದ ಲಾರಿ ತಮಟಗಲ್ಲು ಬಳಿ ರಸ್ತೆ ಬದಿಯಲ್ಲಿ ನಿಂತಿತ್ತು. ಹಿಂದಿನಿಂದ ವೇಗವಾಗಿ ಬಂದ ಇನ್ನೊವಾ ಕಾರು ನೇರವಾಗಿ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಅರ್ಧಭಾಗ ನಜ್ಜುಗುಜ್ಜಾಗಿದೆ. ಕಾರು ಚಾಲಕನ ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments