Select Your Language

Notifications

webdunia
webdunia
webdunia
webdunia

ಐದಂತಸ್ತಿನ ಕಟ್ಟಡ ಕುಸಿದು ಓರ್ವ ವ್ಯಕ್ತಿ ಸಾವು: 15 ಕಾರ್ಮಿಕರು ಕಟ್ಟಡದೊಳಗೆ ಸಿಲುಕಿರುವ ಶಂಕೆ

ಐದಂತಸ್ತಿನ ಕಟ್ಟಡ ಕುಸಿದು ಓರ್ವ ವ್ಯಕ್ತಿ ಸಾವು: 15 ಕಾರ್ಮಿಕರು ಕಟ್ಟಡದೊಳಗೆ ಸಿಲುಕಿರುವ ಶಂಕೆ
ಬೆಂಗಳೂರು , ಬುಧವಾರ, 5 ಅಕ್ಟೋಬರ್ 2016 (15:57 IST)
ಬೆಂಗಳೂರು: ಮಾರತಹಳ್ಳಿಯ ಬೆಳ್ಳಂದೂರ್‌ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ವ್ಯಕ್ತಿ ಮೃತನಾಗಿದ್ದು 15ಕ್ಕೂ ಹೆಚ್ಚು ಜನರು ಕಟ್ಟಡದಡಿಯಲ್ಲಿ ಸಿಲುಕಿರುವ ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. 
 
ಕಟ್ಟಡದ ಅವಶೇಷಗಳ ಅಡಿಯಲ್ಲಿ 15 ಕ್ಕೂ ಹೆಚ್ಚು ಜನ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ನಿರ್ಮಾಣ ಹಂತದ ಕಟ್ಟಡ ಕುಸಿದು ಸಂಚರಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪರಿಣಾಮವಾಗಿ ಕಾರು ಚಾಲಕ ಸಹ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
 
ಕಟ್ಟಡ ಕುಸಿದು ಬಿದ್ದ ಪರಿಣಾಮವಾಗಿ ಪಕ್ಕದ ಅಪಾರ್ಟ್‌ಮೆಂಟ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಓಡಿಶಾ ಮೂಲದ ಅಶೋಕ್ (40) ಎನ್ನುವವರು ಮೃತಪಟ್ಟಿದ್ದಾರೆ. 
 
ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ಸಿಬ್ಬಂದಿ ಒಂದು ಮಗು ಸೇರಿದಂತೆ 4 ಜನರನ್ನು ರಕ್ಷಣೆ ಮಾಡಿದ್ದು, ಗಾಯಾಳುಗಳನ್ನು ಸಕ್ರ ವರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 
 
ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ......
 
ಕುಸಿದು ಬಿದ್ದ ಐದಂತಸ್ತಿನ ಕಟ್ಟಡದಡಿಯಲ್ಲಿ 15 ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸಾವು ನೋವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
webdunia
 
ನಿಯಮ ಉಲ್ಲಂಘನೆ......
 
ಆಂದ್ರ ಮೂಲದ ವಿನಯ್ ಎನ್ನುವಾತ ಕೇವಲ ಎರಡು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲು ಅನುಮತಿ ಪಡೆದು ಕಾನೂನು ಬಾಹಿರವಾಗಿ ಐದು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಾನು ತಪ್ಪಿತಸ್ಥ, ಶಿಕ್ಷೆಗೊಳಪಡಬೇಕು: ಕ್ಷಮೆ ಕೇಳಿದ ಓಂಪುರಿ