ವಿಚಾರಣೆಗೆ ಹೆದರಿ ಒಂದೇ ಕುಟುಂಬದ ಐವರ ಆತ್ಮಹತ್ಯೆ!?

Webdunia
ಮಂಗಳವಾರ, 9 ನವೆಂಬರ್ 2021 (08:50 IST)
ಕೋಲಾರ : ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ದುರಂತ ಅಂತ್ಯ ಕಂಡಿದೆ. ಚಿಕಿತ್ಸೆ ಫಲಕಾರಿಯಾಗದೆ ಇಂದು ನಾಲ್ವರು ಮೃತಪಟ್ಟಿದ್ದಾರೆ.
ಕೋಲಾರ ನಗರದ ಕಾರಂಜಿಕಟ್ಟೆ ಬಡಾವಣೆಯಲ್ಲಿ ಪೊಲೀಸ್ ತನಿಖೆಗೆ ಹೆದರಿ ಮನೆಯಲ್ಲಿ ನಿನ್ನೆ ಸಂಜೆ ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಕುಟುಂಬದ ಎಲ್ಲರನ್ನೂ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಅರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಆರ್. ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಮುನಿಯಪ್ಪ(70), ಬಾಬು (45), ಗಂಗೋತ್ರಿ(17) ಹಾಗೂ ನಾರಾಯಣಮ್ಮ (65) ಮೃತಪಟ್ಟಿದ್ದಾರೆ.
ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪುಷ್ಪಾ ಅವರು ಸ್ನೇಹಿತೆ ಗೀತಾ ಜೊತೆಗೂಡಿ, ಸತ್ಯ-ಸುಮಿತ್ರಾ ಎಂಬ ದಂಪತಿಯ 9 ದಿನದ ಗಂಡು ಮಗುವನ್ನ ಬೇರೊಬ್ಬರಿಗೆ ನೀಡುವುದಾಗಿ ಹೇಳಿ, ಮಾರಾಟ ಮಾಡಿದ್ದರು.
ಬಳಿಕ ನಮಗೆ ಮಗು ವಾಪಾಸ್ ಬೇಕೆಂದು ಸತ್ಯ , ಸುಮಿತ್ರ ದಂಪತಿ ಕೋಲಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ನೆನ್ನೆ ಪೊಲೀಸರು ವಿಚಾರಣೆ ನಡೆಸಿ ಮಗುವನ್ನು ವಾಪಾಸ್ ತಂದು ಕೊಡುವಂತೆ ಪುಷ್ಪ ಹಾಗೂ ಗೀತಾ ಎನ್ನುವರಿಗೆ ಎಚ್ಚರಿಕೆ ನೀಡಿ ಮನೆಗೆ ಕಳಿಸಿದ್ದರು. ಮಾನಕ್ಕೆ ಅಂಜಿದ ಪುಷ್ಪ ಕುಟುಂಬದ ಎಲ್ಲರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೋಲಾರದ ಗಲ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments