Select Your Language

Notifications

webdunia
webdunia
webdunia
webdunia

ರಾಜ್ಯಸಭೆ ಚುನಾವಣೆಗೆ ದಿನಾಂಕ ಫಿಕ್ಸ್​

Fix for Rajya Sabha elections
bangalore , ಶುಕ್ರವಾರ, 13 ಮೇ 2022 (20:23 IST)
ಕರ್ನಾಟಕದ ವಿಧಾನಪರಿಷತ್ ಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ಇದೀಗ ರಾಜ್ಯಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ರಾಜ್ಯದ 4 ಸ್ಥಾನಗಳಿಗೆ ಜೂನ್  10 ರಂದು ಚುನಾವಣೆ ನಡೆಯಲಿದ್ದು, ಜೂನ್ 10ರಂದೇ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಕೆಸಿ ರಾಮಮೂರ್ತಿ, ಜೈರಾಂ ರಮೇಶ್, ಆಸ್ಕರ್ ಫರ್ನಾಂಡಿಸ್, ನಿರ್ಮಲಾ ಸೀತಾರಾಮನ್ ಅವರ ಅವಧಿ ಇದೇ ಜೂನ್ 30ರಂದು ಮುಗಿಯಲಿದೆ. ಈ ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ನಿಗದಿಗೊಳಿಸಲಾಗಿದೆ. ಮೇ 24ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಮೇ 31 ಕೊನೆಯ ದಿನವಾಗಿದೆ. ಮೇ 31ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜೂ. 01ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್ 03ರಂದು ನಾಮಪತ್ರಗಳನ್ನು ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ. ಜೂನ್ 10 ರಂದು ಬೆಳಿಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಂದೇ ಸಂಜೆ 5 ಗಂಟೆಗೆ ಮತಎಣಿಕೆ ಕೂಡ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್