Select Your Language

Notifications

webdunia
webdunia
webdunia
webdunia

ರಾಜ್ಯ 'ವಿಧಾನಮಂಡಲದ ಅಧಿವೇಶನ'ಕ್ಕೆ ಮುಹೂರ್ತ ಫಿಕ್ಸ್

ರಾಜ್ಯ 'ವಿಧಾನಮಂಡಲದ ಅಧಿವೇಶನ'ಕ್ಕೆ ಮುಹೂರ್ತ ಫಿಕ್ಸ್
ಬೆಂಗಳೂರು , ಗುರುವಾರ, 19 ಆಗಸ್ಟ್ 2021 (13:33 IST)
ಬೆಂಗಳೂರು : ಕೋವಿಡ್ ಕಾರಣದಿಂದಾಗಿ ವಿಳಂಬವಾಗಿದ್ದಂತ ರಾಜ್ಯ ವಿಧಾನಮಂಡಲದ ಅಧಿವೇಶನಕ್ಕೆ, ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟೆಂಬರ್ 13 ರಿಂದ 10 ದಿನಗಳ ಕಾಲ ವಿಧಾನ ಮಂಡಲದ ಅಧಿವೇಶನ ನಡೆಸೋದಕ್ಕೆ, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಕೋವಿಡ್ ಸೇರಿದಂತೆ ಇನ್ನಿತರೆ ಕಾರಣಗಳಿಂದಾಗಿ ರಾಜ್ಯ ವಿಧಾನ ಮಂಡಲದ ಅಧಿವೇಶನ ಕರೆಯೋದು ತಡವಾಗಿತ್ತು. ಇದೇ ಕಾರಣದಿಂದಾಗಿ, ವಿಪಕ್ಷಗಳು ಅಧಿವೇಶನ ಕರೆಯೋದಕ್ಕೂ ಆಗ್ರಹಿಸಿದ್ದರು. ಇದೀಗ ಕೊನೆಗೂ ರಾಜ್ಯ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ, ವಿಧಾನ ಮಂಡಲದ ಅಧಿವೇಶ ಕರೆಯೋದಕ್ಕೆ ನಿರ್ಧರಿಸಿದೆ.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟದಲ್ಲಿ ಸೆಪ್ಟೆಂಬರ್ 13 ರಿಂದ ಹತ್ತು ದಿನಗಳ ಕಾಲ, ರಾಜ್ಯ ವಿಧಾನ ಮಂಡಲ ಅಧಿವೇಶನವನ್ನು ನಡೆಸೋದಕ್ಕೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಮೂಲಕ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಶಾಲಾ, ಕಾಲೇಜು ಸಿಬ್ಬಂದಿಗೆ ಲಸಿಕೆ ಕಡ್ಡಾಯಗೊಳಿಸಿದ ಸರ್ಕಾರ