Select Your Language

Notifications

webdunia
webdunia
webdunia
webdunia

ಅಕ್ಟೋಬರ್ ನಲ್ಲಿ ವಿಮಾನ ಹಾರಾಟ ಪ್ರಾರಂಭ: ಖರ್ಗೆ

ಅಕ್ಟೋಬರ್ ನಲ್ಲಿ ವಿಮಾನ ಹಾರಾಟ ಪ್ರಾರಂಭ: ಖರ್ಗೆ
ಕಲಬುರಗಿ , ಶನಿವಾರ, 14 ಜುಲೈ 2018 (17:56 IST)
ಕಲಬುರಗಿ ವಿಮಾನ ನಿಲ್ದಾಣದ ಸಂಪೂರ್ಣ ಕಾಮಗಾರಿಯನ್ನು ಇದೇ ಅಕ್ಟೋಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸಿ ವಿಮಾನ ಹಾರಾಟ ಪ್ರಾರಂಭಗೊಳಿಸಲಾಗುವುದು ಎಂದು ಅಧಿಕಾರಿಗಳು ವಾಗ್ದಾನ ಮಾಡಿದ್ದಾರೆ. ಅದರಂತೆ ನಡೆದುಕೊಳ್ಳುಬೇಕು ಎಂದು ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಅವರು ಶನಿವಾರ ಶ್ರೀನಿವಾಸ ಸರಡಗಿ ಹತ್ತಿರ ನಿರ್ಮಿಸಲಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಯನ್ನು ಪರಿಶೀಲಿಸಿ ಪತ್ರಕರ್ತರೊಂದಿಗೆ ಮಾತನಾಡಿ, ವಿಮಾನ ನಿಲ್ದಾಣದ ಎಲ್ಲ ಕಟ್ಟಡ ಕಾಮಗಾರಿಗಳು ಹಾಗೂ ರನ್ ವೇ ನಿರ್ಮಾಣ ಪೂರ್ಣಗೊಂಡಿದೆ. ಕೇವಲ ವಿದ್ಯುತ್ ಕಾಮಗಾರಿ ಮಾತ್ರ ಬಾಕಿ ಇದೆ. ಈಗಾಗಲೇ ಒಟ್ಟು 96.90 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ತಿಳಿಸಿದರು.

ಸಧ್ಯ ವಿಮಾನ ನಿಲ್ದಾಣದಲ್ಲಿರುವ ಸವಲತ್ತುಗಳಿಂದ ಹಗಲು ಹೊತ್ತು ವಿಮಾನ ಸಂಚಾರ ಪ್ರಾರಂಭಿಸಬಹುದಾಗಿದೆ. ರಾತ್ರಿ ಹೊತ್ತು ವಿಮಾನ ಸೇವೆ ಪ್ರಾರಂಭಿಸಲು ವಿದ್ಯುತ್ ವ್ಯವಸ್ಥೆ ಕಡ್ಡಾಯವಾಗಿ ಅವಶ್ಯಕವಿರುವ ಕಾರಣ ವಿದ್ಯುತ್ ಕಾಮಗಾರಿಯನ್ನು ಪೂರ್ಣಗೊಳಿಸಿದ ನಂತರ ವಿಮಾನ ಸಂಚಾರ ಪ್ರಾರಂಭಿಸುವುದು ಸೂಕ್ತ ಎಂದು ಅಭಿಪ್ರಾಯ ಪಟ್ಟ ಅವರು ವಿದ್ಯುತ್ ಕಾಮಗಾರಿ ಸೇರಿದಂತೆ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಒಟ್ಟು 78 ಕೋಟಿ ರೂ.ಗಳ ಅವಶ್ಯಕತೆಯಿದ್ದು, ಈ ಬಾರಿಯ ಆಯವ್ಯಯದಲ್ಲಿ 65 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಹೆಚ್ಚಿನ ಹಣ ಬೇಕಾದಲ್ಲಿ ಹೆಚ್.ಕೆ.ಆರ್.ಡಿ.ಬಿ.ಯಿಂದ ನೀಡಲಾಗುವುದು. ಈಗಾಗಲೇ ವಿದ್ಯುತ್ ಗುತ್ತಿಗೆದಾರರು ವಿದ್ಯುತ್ ಉಪಕರಣಗಳನ್ನು ಖರೀದಿಸಲು ಕ್ರಮ ಕೈಗೊಂಡಿರುವುದಾಗಿ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಠಾಣೆಯಲ್ಲಿ ವ್ಯಕ್ತಿ ಸಾವು ಪ್ರಕರಣ: ಪಿಎಸ್ ಐ ಸೇರಿ ನಾಲ್ವರ ಅಮಾನತು