Select Your Language

Notifications

webdunia
webdunia
webdunia
webdunia

ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ: ಪಿಂಡ ಪ್ರದಾನ, ಪ್ರವಾಸಿ ತಾಣಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ

Monsoon is raging in the state, KRS Dam, Mandya District Administration

Sampriya

ಬೆಂಗಳೂರು , ಭಾನುವಾರ, 27 ಜುಲೈ 2025 (13:29 IST)
Photo Credit X
ಬೆಂಗಳೂರು:  ಮುಂಗಾರು ಅಬ್ಬರದಿಂದಾಗಿ ಕೆಆರ್‌ಎಸ್ ಅಣೆಕಟ್ಟೆಯ ಒಳಹರಿವು ಹಾಗೂ ಹೊರಹರಿವಿನಲ್ಲಿ ಏರಿಕೆಯಾಗಿದೆ. ಅದರ ಬೆನ್ನಲ್ಲೇ ಮಂಡ್ಯ ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ. 

ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿರುವ ಪರಿಣಾಮ ಕಾವೇರಿ ನದಿಯಲ್ಲಿ ಪಿಂಡ ಪ್ರದಾನಕ್ಕೆ ಮಂಡ್ಯ ಜಿಲ್ಲಾಡಳಿತ ನಿಷೇಧ ಹೇರಿದೆ. ಅದರ ಜೊತೆಗೆ ಕಾವೇರಿ ನದಿ ಪಾತ್ರದಲ್ಲಿ ಇರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ನಿರ್ಬಂಧ ಹೇರಿದೆ. 

ಹಳೆ ಮೈಸೂರು ಭಾಗದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆಯ ಒಳಹರಿವು ಹಾಗೂ ಹೊರಹರಿವಿನಲ್ಲಿ ಏರಿಕೆಯಾಗಿದೆ. ಕೆಆರ್‌ಎಸ್ ಡ್ಯಾಂಗೆ 52,856 ಕ್ಯೂಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆ ಡ್ಯಾನಿಂದ 56,474 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.  

124.80 ಅಡಿ ಗರಿಷ್ಠ ಮಟ್ಟದ ಕೆಆರ್‌ಎಸ್ ಡ್ಯಾಂ 123.80 ಅಡಿಯಷ್ಟು ಭರ್ತಿಯಾಗಿದೆ. ಡ್ಯಾಂ 49.452 ಟಿಎಂಸಿ ಗರಿಷ್ಠ ಸಾಮಾರ್ಥ್ಯ ಹೊಂದಿದೆ. ಇಂದು 48.062 ಟಿಎಂಸಿಯಷ್ಟು ನೀರು ಶೇಖರಣೆ ಆಗಿದೆ. ಈಗಾಗಲೇ ಮಂಡ್ಯ ಜಿಲ್ಲಾಡಳಿತ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳದಲ್ಲಿ ಇರುವುದರ ಜೊತೆಗೆ ಆಸ್ತಿ- ಪಾಸ್ತಿ, ಜಾನುವಾರುಗಳ ರಕ್ಷಣೆ ಸಂಬಂಧ ಅಲರ್ಟ್ ಘೋಷಣೆ ಮಾಡಿದೆ.  

ಕೆಆರ್‌ಎಸ್ ಅಣೆಕಟ್ಟೆ ಜೂನ್ ತಿಂಗಳಲ್ಲಿಯೇ ಭರ್ತಿಯಾಗಿರುವುದರಿಂದ ಇನ್ನುಮುಂದೆ ಬಂದ ಒಳಹರಿವನ್ನು, ಹೊರಹರಿವನ್ನಾಗಿ ಮಾಡಬೇಕಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾವೇರಿ ಕೊಳ್ಳದಲ್ಲಿ ಪ್ರವಾಹ ಎದುರಾಗುವ ಸಾಧ್ಯತೆ ಸಹ ಇದೆ.   

Share this Story:

Follow Webdunia kannada

ಮುಂದಿನ ಸುದ್ದಿ

ಮಲೆನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ: ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ