Select Your Language

Notifications

webdunia
webdunia
webdunia
Friday, 11 April 2025
webdunia

ಪ್ರವಾಹದಿಂದಾದ ಹಾನಿ: ಕೇಂದ್ರಕ್ಕೆ ನೆರವಿಗೆ ಮೊರೆ

ಸಿಎಂ
ನವದೆಹಲಿ , ಶುಕ್ರವಾರ, 5 ಅಕ್ಟೋಬರ್ 2018 (19:56 IST)
ಮಲೆನಾಡು, ಕೊಡಗು ಸೇರಿದಂತೆ ಇತರ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾದ ಪ್ರವಾಹಕ್ಕೆ ಅಪಾರ ಹಾನಿ ಸಂಭವಿಸಿದೆ. ವಿವಿಧೆಡೆ ಪರಿಹಾರ ಕಾಮಗಾರಿ ಕೈಗೊಳ್ಳಲು ಅಗತ್ಯ ನೆರವು ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ.

ಕೊಡಗು ಹಾಗೂ ಮಲೆನಾಡು ಭಾಗದಲ್ಲಿ ಸುರಿದ ಅಪಾರ ಮಳೆಗೆ 3400 ಕೋಟಿಗೂ ಅಧಿಕ ನಷ್ಟವಾಗಿದೆ. ಜನಜೀವನ ಅಸ್ತವ್ಯವಸ್ತವಾಗಿದೆ. ಹೀಗಾಗಿ ಪರಿಹಾರ ಕಾಮಗಾರಿ ಕೈಗೊಳ್ಳಲು ಅಗತ್ಯ ನೆರವು ನೀಡುವಂತೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಚಿವ ಹೆಚ್.ಡಿ.ರೇವಣ್ಣ ಮತ್ತಿತರರು ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಕೊಡಗಿನ ವಾಸ್ತವ ಸ್ಥಿತಿಯನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ. ಕೆಲವೆಡೆ ಬರ ಪರಿಸ್ಥಿತಿ ಇರುವುದನ್ನು ಕೇಂದ್ರದ ಗಮನಕ್ಕೆ ತರಲಾಗಿದೆ. ತುರ್ತು ನೆರವು ನೀಡುವಂತೆ ಕೋರಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಸುತ್ತ ಸಚಿವ ಆಕಾಂಕ್ಷಿಗಳ ಚಿತ್ತ